logo
WhatsApp Image 2026-04-02 at 14.46.04.jpeg
hindalco everlast.jpeg

ಮಾಜಿ ಸಿಎಂ ಕುಮಾರಸ್ವಾಮಿ ಬೆಂಗಾವಲು ವಾಹನ ಅಪಘಾತ: 3 ಮಂದಿಗೆ ಗಾಯ

ಟ್ರೆಂಡಿಂಗ್
share whatsappshare facebookshare telegram
2 Aug 2022
post image

 

ಮಂಗಳೂರು ಭೇಟಿ ಮುಗಿಸಿ ಹಿಂತಿರುಗುತ್ತಿದ್ದ 

ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿ 3 ಮಂದಿ ಪೊಲೀಸ್​ ಸಿಬ್ಬಂದಿ ಗಾಯಗೊಂಡಿದ್ದಾರೆ.

ಕುಣಿಗಲ್ ಸಮೀಪದ ತಿಪ್ಪೂರು ಗೇಟ್ ಬಳಿ 

ಸೋಮವಾರ ತಡರಾತ್ರಿ ಸುಮಾರು 1 ಗಂಟೆ ವೇಳೆಗೆ ಘಟನೆ ನಡೆದಿದೆ. ಬೆಂಗಾವಲು ವಾಹನ ರಸ್ತೆಯ ತಡೆಗೋಡೆಗೆ ಗುದ್ದಿ ರಸ್ತೆಯಿಂದಾಚೆಗೆ ನುಗ್ಗಿದೆ. ಪರಿಣಾಮ ವಾಹನದಲ್ಲಿದ್ದ 5 ಮಂದಿಯಲ್ಲಿ

ಮೂವರಿಗೆ ಗಾಯಗಳಾಗಿವೆ.

ಗಾಯಗೊಂಡ ಪೊಲೀಸ್ ಸಿಬ್ಬಂದಿಗಳನ್ನು ಮಹೇಶ್, ಮಂಜುನಾಥ್ ಹಾಗೂ ಆನಂದ್ ಹರೀಶ್​ ಎಂದು ಗುರುತಿಸಲಾಗಿದೆ.

ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.