



ಬೆಂಗಳೂರು: ಕಾಂಗ್ರೆಸ್ ಪಕ್ಷದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸೋ ಮೂಲಕ ಗುಡ್ ಬೈ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ಗೆ ಬಿಗ್ ಶಾಕ್ ನೀಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಪತ್ರ ಬರೆದಿರುವ ಪ್ರಮೋದ್ ಮಧ್ವರಾಜ್ ಇಷ್ಟು ವರ್ಷಗಳ ಕಾಲ ನನಗೆ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕೆ ಧನ್ಯವಾದಗಳು.ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನನಗೆ ಸಚಿವ ಸ್ಥಾನವನ್ನು ನೀಡಿ ಜನರ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕೆ ಆಭಾರಿಯಾಗಿದ್ದೇನೆ. ಆದರೆ ಉಡುಪಿ ಜಿಲ್ಲಾ ಕಾಂಗ್ರೆಸ್ ನಲ್ಲಿ ನನಗೆ ಮುಂದುವರಿಯಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಲು ವಿಷಾದ ವ್ಯಕ್ತಪಡಿಸುತ್ತೇನೆ. ನನಗೆ ಕೆಪಿಸಿಸಿ ಉಪಾಧ್ಯಕ್ಷನ ಸ್ಥಾನವನ್ನು ನೀಡಿದ್ದೀರಿ. ಆದರೆ ಇದನ್ನು ಒಪ್ಪಿಕೊಳ್ಳಲು ನನ್ನಿಂದ ಸಾಧ್ಯವಾಗುತ್ತಿಲ್ಲ. ಹೀಗಾಗಿ ನಾನು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ಸುದೀರ್ಘವಾಗಿ ಬರೆದಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.