



ನವದೆಹಲಿ : ರೋಹಿತ್ ಶರ್ಮಾ ಜೊತೆಗೆ ಲೈವ್ ಚಾಟ್‌ನಲ್ಲಿ ಭಾಗವಹಿಸಿದ್ದ ಯುವರಾಜ್, ತಮ್ಮ ಸಂಭಾಷಣೆ ವೇಳೆ ಯಜುವೇಂದ್ರ ಚಹಲ್ ಮತ್ತು ಕುಲ್ದೀಪ್ ಯಾದವ್ ಬಗ್ಗೆ ಜಾತಿ ಸೂಚಕ ಪದ ಬಳಸಿದ್ದರು. ಜಾತಿ ನಿಂದನೆ ಆರೋಪದಡಿಯಲ್ಲಿ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಹಿಸ್ಸಾರ್ ಪೊಲೀಸರು ಬಂಧಿಸಿದ್ದಾರೆ.
ಕಳೆದ ವರ್ಷ ರೋಹಿತ್ ಶರ್ಮಾ ಜೊತೆಗಿನ ಸಂವಾದದಲ್ಲಿ ಪರಿಶಿಷ್ಟ ಜಾತಿ ಬಗ್ಗೆ ಯುವಿ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಹಂಸಿ ನಗರ ಪೊಲೀಸ್ ಠಾಣೆಯಲ್ಲಿ ಯುವರಾಜ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಯುವರಾಜ್ ಸಿಂಗ್ ಅವರನ್ನು ಬಂಧಿಸಿರುವ ಹಂಸಿ ಠಾಣಾ ಪೊಲೀಸರು ಘಟನೆಯ ಬಗ್ಗೆ ವಿಚಾರಣೆ ನಡೆಸಿದರು. ಆ ಬಳಿಕ ಹೈಕೋರ್ಟ್ ಆದೇಶದ ಮೇರೆಗೆ ಯುವರಾಜ್ ಸಿಂಗ್ ಅವರನ್ನು ಔಪಚಾರಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.