



ಮಂಗಳೂರು: ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಯಾವುದೇ ಗಲಾಟೆ, ವಾಗ್ವಾದ ನಡೆದಿಲ್ಲ ಎಂದು ಮಾಜಿ ಸಚಿವರಾದ ಬಿ. ರಮಾನಾಥ ರೈ ಹಾಗೂ ಯು.ಟಿ.ಖಾದರ್ ಹೇಳಿದರು.
ಕಾಂಗ್ರೆಸ್ ಕಚೇರಿ ಹೊರಗಡೆ ಮಂಗಳವಾರ ಮಾಧ್ಯಮ ಜತೆ ಮಾತನಾಡಿದ ರಮಾನಾಥ ರೈ ಅವರು, ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಮಾಡಿದ ಅವಮಾನದ ಕುರಿತು ಯಾವ ರೀತಿ ಪ್ರತಿಭಟನೆ ನಡೆಸಬೇಕು ಎನ್ನುವ ಕುರಿತು ಚರ್ಚೆ ಮಾಡಲಾಯಿತು. ಅದರಲ್ಲಿ ಕೆಲವು ಭಿನ್ನಾಭಿಪ್ರಾಯಗಳು ವ್ಯಕ್ತವಾದವು. ಎಗ್ರೆಸಿಯು ಆಗಿ ಪ್ರತಿಭಟನೆ ನಡೆಸುವ ಬಗ್ಗೆ ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದರು ಅಷ್ಟೇ ಎಂದರು.
ಮಾಜಿ ಸಚಿವ ಖಾದರ್ ಮಾತನಾಡಿ, ಸಭೆಯಲ್ಲಿ ಯಾವುದೇ ಗಲಾಟೆ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.