



ಹೊನ್ನಾವರ: ಮಾಜಿ ಶಾಸಕ ಎಂಪಿ.ಕರ್ಕಿ ನಿಧನ ಮಾಜಿ ಶಾಸಕ ಎಂ.ಪಿ ಕರ್ಕಿ ಸೋಮವಾರ ರಾತ್ರಿ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ಉ.ಕ ಜಿಲ್ಲೆಯಲ್ಲಿ ಬಿಜೆಪಿಗೆ ಭದ್ರ ಬುನಾದಿ ಹಾಕುವಲ್ಲಿ ಮಹತ್ತರ ಕೊಡುಗೆ ನೀಡಿರುವ ಇವರು ಹೊನ್ನಾವರ ವಿಧಾನಸಭಾ ಕ್ಷೇತ್ರವನ್ನು ಎರಡು ಬಾರಿ ಪ್ರತಿನಿಧಿಸಿದ್ದರು. ಜಿಲ್ಲೆಯಲ್ಲಿ ಡಾ. ಚಿತ್ತರಂಜನ್ ಒಡಗೂಡಿ ಪಕ್ಷಕ್ಕೆ ಪ್ರಬಲ ಅಡಿಪಾಯ ಒದಗಿಸಿದ್ದರು. ಹಿಂದೂಪರ ಅನೇಕ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ನಿಂತವರು. ಹೊನ್ನಾವರ ಎಜ್ಯುಕೇಶನ ಸೊಸೈಟಿ ಸೇರಿ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ನಾಲ್ಕೈದು ದಿನಗಳ ಹಿಂದೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪುತ್ರ, ಪುತ್ರಿ ಅಪಾರ ಬಳಗವನ್ನು ಬಿಟ್ಟಗಲಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.