



ಚಂಡೀಗಢ: ಕೇಂದ್ರದ ಮಾಜಿ ಸಚಿವ ಹಾಗೂ ಅಂಬಾಲಾದ ಬಿಜೆಪಿ ಸಂಸದ ರತನ್ ಲಾಲ್ ಕಟಾರಿಯಾ (71) ಗುರುವಾರ ನಿಧನರಾಗಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲ ತಿಂಗಳುಗಳಿಂದ ರನತ್ ಅವರು ಪಿಜಿಐಎಂಇಆರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತೊದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನ ಜಾವ 3.30ರ ಸುಮಾರಿಗೆ ಆಸ್ಪತ್ರೆಯಲ್ಲಿಯೇ ರತನ್ ಕೊನೆಯುಸಿರೆಳೆದರು.
ಕಟಾರಿಯಾ ಅವರ ಪಾರ್ಥಿವ ಶರೀರವನ್ನು ಪಂಚಕುಲದ ನಿವಾಸದಲ್ಲಿ ಇರಿಸಲಾಗಿದ್ದು ಸಾರ್ವಜನಿಕರು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಸಂಜೆ ಮಣಿಮಜ್ರಾದಲ್ಲಿ ಅಂತಿಮ ವಿಧಿವಿಧಾನಗಳನ್ನು ನೇರಿವೇರಿಸಲಾಗುವುದು ಎಂಬುದಾಗಿ ಅವರ ಕುಟುಂಬದ ಮೂಲಗಳು ಮಾಧ್ಯಮಕ್ಕೆ ತಿಳಿಸಿವೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.