



ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಮೈನರ್ ಬಸಿಲಿಕಾದ ವಾರ್ಷಿಕೋತ್ಸವ ಫೆ.೨೦ರಿಂದ ೨೪ರವರೆಗೆ ನಡೆಯಲಿದೆ. ಪ್ರತಿವರ್ಷ ಜನವರಿಯಲ್ಲಿ ಈ ವಾರ್ಷಿಕೋತ್ಸವ ನಡೆಸಲಾಗುತ್ತಿತ್ತು. ಆದರೆ ಕೋವಿಡ್ ಹಿನ್ನೆಲೆಯಲ್ಲಿ ವಾರ್ಷಿಕೋತ್ಸವನ್ನು ಅನಿರ್ದಿಷ್ಠಾವಧಿಗೆ ಮುಂದೂಡಲಾಗಿತ್ತು. ಸಂತ ಲಾರೆನ್ಸ್ ಮೈನರ್ ಬಸಿಲಿಕಾ ಆಗಿ ಮಾರ್ಪಾಡು ಆದ ಬಳಿಕ ಹತ್ತು ದಿನಗಳ ವಾರ್ಷಿಕೋತ್ಸವವನ್ನು ನಡೆಸಲಾಗುತ್ತಿತ್ತು. ಈ ಬಾರಿ ಐದು ದಿನಗಳ ಕಾಲ ಹಬ್ಬ ಆಚರಿಸಲು ನಿರ್ಧರಿಸಲಾಗಿದೆ ಎಂದು ಬಸಿಲಿಕದ ಪ್ರಕಟಣೆಯಲ್ಲಿ ತಿಳಿಸಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.