logo
WhatsApp Image 2026-04-02 at 14.46.04.jpeg
hindalco everlast.jpeg

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ

ರಾಜ್ಯ
share whatsappshare facebookshare telegram
4 Mar 2023
post image

ಹುಬ್ಬಳ್ಳಿ: ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ಸಂಸ್ಥೆಯ ಬಸ್‍ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ತಿಳಿಸಿದೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬೇರೆ ಬೇರೆ ಶಾಲೆಗಳಲ್ಲಿ ಪರೀಕ್ಷೆಗಳು ನಡೆಯುವುದರಿಂದ ಶಿಕ್ಷಣ ಇಲಾಖೆಯ ಕೋರಿಕೆಯ ಮೇರೆಗೆ ಈ ವ್ಯವಸ್ಥೆ ಮಾಡಲಾಗಿದೆ.

ಮಾರ್ಚ್ 9ರಿಂದ 29ರವರೆಗೆ ನಡೆಯಲಿರುವ ಪರೀಕ್ಷೆಗಳಿಗೆ ತೆರಳುವ ವಿದ್ಯಾರ್ಥಿಗಳು ನಿರ್ವಾಹಕರಿಗೆ ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ಉಚಿತ ಪ್ರಯಾಣದ ಸೌಲಭ್ಯ ಪಡೆಯಬಹುದಾಗಿದೆ. ಸಂಸ್ಥೆಯ ನಗರ, ಉಪನಗರ, ಸಾಮಾನ್ಯ ಹಾಗೂ ವೇಗದೂತ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಸಂಸ್ಥೆ ತಿಳಿಸಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.