logo
WhatsApp Image 2026-04-02 at 14.46.04.jpeg
hindalco everlast.jpeg

ಆದಿವಾಸಿ ಬುಡಕಟ್ಟು ಮಲೆಕುಡಿಯ ಸಮುದಾಯದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ

ಟ್ರೆಂಡಿಂಗ್
share whatsappshare facebookshare telegram
18 Oct 2022
post image

ಕಾರ್ಕಳ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರ್ಕಾರ ರಾಷ್ಟ್ರೀಯ ಸೇವಾ ಯೋಜನೆ ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ) ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಉಡುಪಿ ಸಮಗ್ರ ಗ್ರಾಮೀಣ ಆಶ್ರಮ, ಉಡುಪಿ ರಾಜ್ಯ ಮಲೆಕುಡಿಯ ಸಂಘ, ಕರ್ನಾಟಕ ಜಿಲ್ಲಾ ಮಲೆಕುಡಿಯ ಸಂಘ (ರಿ.), ಉಡುಪಿ

ಇದರ ವತಿಯಿಂದ ಅಕ್ಟೋಬರ್ 16 ರಂದು ಮಾಳ ಪೇರಡ್ಕದ ಮಲೆಕುಡಿಯ ಸಮುದಾಯ ಭವನದಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಜರಗಿತು. ಈ ಕಾರ್ಯಕ್ರಮದಲ್ಲಿ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಮಾನ್ಯ ಸಚಿವರಾದ ಶ್ರೀ ವಿ ಸುನಿಲ್ ಕುಮಾರ್ ಆರೋಗ್ಯ ಕಾರ್ಡ್ ವಿತರಣೆ ಮಾಡಿ ಮಲೆಕುಡಿಯರು ಅತ್ಯಂತ ಕಠಿಣ ಶ್ರಮಜೀವಿಗಳು ನಿರಂತರ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಬದುಕು ಸಾಗಿಸುತ್ತ ಬಂದವರು. ಆರೋಗ್ಯದ ವಿಚಾರದಲ್ಲಿ ಪ್ರತಿಯೊಬ್ಬರು ಆಗಾಗ್ಗೆ ತಪಾಸಣೆ ಮಾಡಿಸಿಕೊಳ್ಳುವುದು ಆರೋಗ್ಯದ ದೃಷ್ಟಿಯಿಂದ ಬಹಳ ಅನಿವಾರ್ಯ ಎಂದರು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷರಾದ ಗಂಗಾಧರ ಬಿ. ಗೌಡ ಇವರು ವಹಿಸಿದ್ದರು. ರಾಜ್ಯ ಅಧ್ಯಕ್ಷರಾದ ಶ್ರೀಧರ್ ಗೌಡ ಈದು ಪ್ರಾಸ್ತಾವಿಕವಾಗಿ ಮಾತನಾಡಿದರು. ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾನಿಲಯ) ದ ಡಾ. ಅಶ್ವಿನಿ ಶೆಟ್ಟಿ, ಪ್ರೊಪೆಸರ್ ಇಮ್ರಾನ್ ಪಾಷಾ ಮಾಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರಕ್ಷಿತಾ ಶೆಟ್ಟಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀಮತಿ ಗೀತಾ ಕಬ್ಬಿನಾಲೆ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಅಶೋಕ್ ಕೆರ್ವಾಶೆ ಕಾರ್ಯಕ್ರಮ ನಿರೂಪಿಸಿ ಶ್ರೀಮತಿ ಪುಷ್ಪ ಸ್ವಾಗತಿಸಿ ಜಿಲ್ಲಾ ಸಂಘದ ಕೋಶಾಧಿಕಾರಿ ಶ್ರೀಮತಿ ಸುಂದರಿ ಧನ್ಯವಾದವಿತ್ತರು

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.