



ಹೆಬ್ರಿ : ನೆಹರು ಯುವ ಕೇಂದ್ರ ಉಡುಪಿ, ಶಾಂತಿನಿಕೇತನ ಯುವ ವೃಂದ ಕುಡಿಬೈಲ್ ಕುಚ್ಚೂರು ಹಾಗೂ ಶ್ರೀದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಅಬ್ಬನಡ್ಕ- ನಂದಳಿಕೆ ಇವರ ಸಹಯೋಗದೊಂದಿಗೆ ಸ್ನೇಹ ಸಂಗಮ ಕಾರ್ಯಕ್ರಮ ಭಾನುವಾರ ಶಾಂತಿನಿಕೇತನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಶ್ರೀದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಮಾತನಾಡಿ ಸಂಘಟಿಸುವುದು ಸುಲಭದ ವಿಷಯವಲ್ಲ ಇದರ ಹಿಂದೆ ಅವಿರತ ಶ್ರಮವಿದೆ. ಶಾಂತಿನಿಕೇತನ ಸಂಸ್ಥೆ ಹೆಬ್ರಿ ಭಾಗದಲ್ಲಿ ಉತ್ತಮ ಸಾಮಾಜಿಕ ಚಟುವಟಿಕೆಗಳನ್ನು ಮಾಡುತ್ತ ಬಂದಿದ್ದು ಇವೆಲ್ಲ ಕಾರಣಗಳಿಂದ ಶಾಂತಿನಿಕೇತನಕ್ಕೆ ನೆಹರು ಯುವ ಕೇಂದ್ರದಿಂದ ಕೊಡ ಮಾಡುವ ರಾಜ್ಯದ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಬಂದಿರುವುದು ಹೆಮ್ಮೆಯ ವಿಷಯ ಎಂದರು.
ಕಾರ್ಯಕ್ರಮದಲ್ಲಿ ಶಾಂತಿನಿಕೇತನ ಅಧ್ಯಕ್ಷ ರಾಜೇಶ್ ಮಾತನಾಡುತ್ತಾ ಜಿಲ್ಲೆಯಲ್ಲಿ ಮೊದಲ ಬಾರಿಗೆ ಎರಡು ಸಂಘ-ಸಂಸ್ಥೆಗಳು ಒಟ್ಟಾಗಿ ಸ್ನೇಹ ಸಂಗಮಕ್ಕೆ ಸಾಕ್ಷಿಯಾಗಿದೆ. ಇನ್ನೊಬ್ಬರ ಏಳಿಗೆಯನ್ನು ಗುರುತಿಸುವ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ ಸಾಮಾಜಿಕ ಬದ್ಧತೆಯ ಅನಂತ ಧನ್ಯವಾದಗಳನ್ನು ಸಮರ್ಪಿಸುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಶ್ರೀದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅವರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಂತಿನಿಕೇತನ ಸೌಹಾರ್ದ ಸಹಕಾರಿಯ ನಿರ್ದೇಶಕ ಶ್ರೀಕಾಂತ್ ಸುವರ್ಣ, ಶ್ರೀದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ ಸಂಚಾಲಕ ಸಂದೀಪ್ ಪೂಜಾರಿ, ಓಂಕಾರ ಮಹಿಳಾ ಮಂಡಳಿಯ ಅಧ್ಯಕ್ಷೆ ಜಯಶ್ರೀ, ಪ್ರಧಾನ ಕಾರ್ಯದರ್ಶಿ ಜಯಕರ್ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.