logo
WhatsApp Image 2026-04-02 at 14.46.04.jpeg
hindalco everlast.jpeg

ಇಂದಿನಿಂದ ಜಿ- 20 ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆ

ದೇಶ-ವಿದೇಶ
share whatsappshare facebookshare telegram
1 Mar 2023
post image

ನವದೆಹಲಿ: ಭಾರತ ಜಿ- 20 ರಾಷ್ಟ್ರಗಳ ಅಧ್ಯಕ್ಷ ಸ್ಥಾನ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ವಿದೇಶಾಂಗ ಸಚಿವರ ಸಭೆ ಇಂದು ನಡೆಯಲಿದೆ. ಎರಡು ದಿನಗಳ ಕಾಲ ಮಹತ್ವದ ಶೃಂಗಸಭೆ ನಡೆಯಲಿದೆ. ಉಕ್ರೇನ್ ಮೇಲಿನ ರಷ್ಯಾ ದಾಳಿಗೆ ಒಂದು ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ಶೃಂಗಸಭೆ ಅತ್ಯಂತ ಮಹತ್ವ ಪಡೆದಿದೆ.

ಜಿ- 20 ರಾಷ್ಟ್ರಗಳ ಸಭೆಯಲ್ಲಿ ಭಾಗವಹಿಸಲು ರಷ್ಯಾದ ವಿದೇಶಾಂಗ ಸಚಿವ ಲಾರ್ವೋ ಈಗಾಗಲೇ ನವದೆಹಲಿಗೆ ಆಗಮಿಸಿದ್ದಾರೆ ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕನ್ ಮತ್ತು ಚೀನಾದ ವಿದೇಶಾಂಗ ಸಚಿವರು ಕೂಡ ಶೃಂಗ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಭಾರತದ ವಿದೇಶಾಂಗ ಸಚಿವ ಜೈ ಶಂಕರ್ ಜತೆ ಚೀನಾ ವಿದೇಶಾಂಗ ಸಚಿವರು ದ್ವಿಪಕ್ಷೀಯ ಮಾತುಕತೆ ನಡೆಸುವ ಸಾಧ್ಯತೆ ಕೂಡ ಇದೆ. ಗಡಿಯಲ್ಲಿ ಉದ್ವಿಗ್ನತೆ ನಿವಾರಣೆಗೆ ಇದು ನೆರವಾಗಲಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.