


ನಿಟ್ಟೆ: 'ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದೂರ್ ಶಾಸ್ತ್ರಿಯಂತಹ ಮಹಾನ್ ನಾಯಕರು ಹಾಕಿ ಕೊಟ್ಟ ಅಹಿಂಸಾ ಮಾರ್ಗ ಹಾಗೂ ಅವರ ಜೀವನ ಶೈಲಿಯು ಇಂದಿನ ಯುವಕರಿಗೆ ಮಾದರಿಯಾಗಬೇಕು' ಎಂದು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಳೂಣ್ಕರ್ ಅಭಿಪ್ರಾಯಪಟ್ಟರು.
ನಿಟ್ಟೆ ಸಮೂಹ ವಿದ್ಯಾಸಂಸ್ಥೆಯು ಸೋಮವಾರ (ಅ. 2) ರಂದು ಆಯೋಜಿಸಿದ್ದ ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜಯಂತಿ ಸಮಾರಂಭ ಹಾಗೂ ಅದರ ಅಂಗವಾಗಿ ಸ್ವಚ್ಛಭಾರತ್ ಅಭಿಯಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಅತಿಥಿಗಳಾಗಿ ಆಗಮಿಸಿದ್ದ ನಿಟ್ಟೆ ತಾಂತ್ರಿಕ ಕಾಲೇಜಿನ ಉಪಪ್ರಾಂಶುಪಾಲ ಡಾ.ಐ ರಮೇಶ್ ಮಿತ್ತಂತಾಯ ಮತ್ತು ಎನ್.ಆರ್.ಎ.ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಪ್ರಶಾಂತ್ ಹೊಳ್ಳ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಈ ಕಾರ್ಯಕ್ರಮವನ್ನು ನಿಟ್ಟೆ ತಾಂತ್ರಿಕ ಕಾಲೇಜಿನ ಎನ್.ಎಸ್.ಎಸ್, ಯೂಥ್ ರೆಡ್ ಕ್ರಾಸ್ ಯುನಿಟ್ ನ ಸಹಯೋಗದೊಂದಿಗೆ ಆಚರಿಸಲಾಯಿತು. ಎನ್.ಎಸ್.ಎಸ್ ನ ಪ್ರಾಧ್ಯಾಪಕ ಸಂಯೋಜಕ ಶ್ರೀನಿವಾಸ ನೆಕ್ಕಾರ್ ಹಾಗೂ ಯೂಥ್ ರೆಡ್ ಕ್ರಾಸ್ ಯುನಿಟ್ ನ ಮುಖ್ಯಸ್ಥ ಡಾ. ಜನಾರ್ದನ್ ನಾಯಕ್ ಉಪಸ್ಥಿತರಿದ್ದರು.
ಸಭಾಕಾರ್ಯಕ್ರಮದ ಅನಂತರ ನಿಟ್ಟೆ ತಾಂತ್ರಿಕ ಕಾಲೇಜಿನ ೨೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿಟ್ಟೆ ಕಾಲೇಜು ಕ್ಯಾಂಪಸ್ ನ ಸುತ್ತಮುತ್ತ ಹಾಗೂ ಹಾಸ್ಟೆಲ್ ವಿದ್ಯಾರ್ಥಿಗಳು ಹಾಸ್ಟೆಲ್ ಆವರಣದ ಸುತ್ತಮುತ್ತ ಸ್ವಛತಾ ಕಾರ್ಯವನ್ನು ಕೈಗೊಂಡರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.