



ಕುಂದಾಪುರ: DCX ಸಿಸ್ಟಮ್ಸ್ ಲಿಮಿಟೆಡ್ ಅರ್ಪಿಸುವ ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲಮಹಾಸಂಸ್ಥಾನ, ಶ್ರೀರಾಘವೇಂದ್ರ ಸ್ವಾಮಿಗಳವರ ಮಠ, ಮಂತ್ರಾಲಯದ ಪರಮ ಪೂಜ್ಯ ಪೀಠಾದಿಪತಿಗಳಾದ ಡಾ|| ಪರಮಪೂಜ್ಯ ಶ್ರೀ ಶ್ರೀ ಶ್ರೀ 108 ಶ್ರೀಮತ್ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಕೊಡಮಾಡುವ ಪ್ರತಿಷ್ಠಿತ ಶ್ರೀ ಪರಿಮಳ ಪ್ರಶಸ್ತಿ 2025 ಈ ಪ್ರಶಸ್ತಿಗೆ ಹೆಮ್ಮಾಡಿ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ರೂವಾರಿ, ಶಿಕ್ಷಣ ಕ್ಷೇತ್ರದ ಕನಸುಗಾರ ಗಣೇಶ್ ಮೊಗವೀರ ಅವರನ್ನು ಆಯ್ಕೆ ಮಾಡಲಾಗಿದ್ದು, ಇದುವರೆಗೆ ಇವರು ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಕೊಡುಗೆಗಳನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಮಾರ್ಚ್ 7 ರಂದು ಮಂತ್ರಾಲಯದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಆಯ್ಕೆ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.