



ಲುಧಿಯಾನ(ಪಂಜಾಬ್): ಭಾನುವಾರ ಪಂಜಾಬ್‌ನ ಲುಧಿಯಾನದ ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆಯಾಗಿದ್ದರಿಂದ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. 11 ಮಂದಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗಿಯಾಸ್ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅನಿಲ ಸೋರಿಕೆಗೆ ಕಾರಣವೇನು ಎಂಬುದು ತಿಳಿದುಬಂದಿಲ್ಲ.
ರಕ್ಷಣಾ ಕಾರ್ಯಾಚರಣೆಗಾಗಿ ಎನ್‌ಡಿಆರ್‌ಎಫ್ ತಂಡವಲ್ಲದೆ ಸ್ಥಳೀಯ ಪೊಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಸುತ್ತಮುತ್ತಲಿನ ಜನರಿಗೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ.
ಇದು ಅನಿಲ ಸೋರಿಕೆ ಪ್ರಕರಣವಾಗಿದೆ. ಜನರನ್ನು ಸ್ಥಳಾಂತರಿಸಲು ಎನ್‌ಡಿಆರ್‌ಎಫ್ ತಂಡವು ಸ್ಥಳದಲ್ಲಿದೆ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ ಎಂದು ಲುಧಿಯಾನ ಪಶ್ಚಿಮ ವಿಭಾಗದ ಎಸ್‌ಡಿಎಂ ಸ್ವಾತಿ ಹೇಳಿದ್ದಾರೆ. ಲುಧಿಯಾನದ ಗಿಯಾಸ್ಪುರ ಪ್ರದೇಶದಲ್ಲಿನ ಕಾರ್ಖಾನೆಯಲ್ಲಿ ಅನಿಲ ಸೋರಿಕೆ ಘಟನೆಯು ತುಂಬಾ ದುಃಖಕರವಾಗಿದೆ. ಪೊಲೀಸ್, ಆಡಳಿತ ಮತ್ತು NDRF ತಂಡಗಳು ಸ್ಥಳದಲ್ಲಿವೆ. ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ” ಎಂದು ಪಂಜಾಬ್ ಸಿಎಂ ಭಗವಂತ ಮಾನ್ ಪಂಜಾಬಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.