



ಬೆಂಗಳೂರು: ಸ್ನಾನ ಮಾಡಲು ಬಾತ್‌ರೂಮ್‌ಗೆ ಹೋಗಿದ್ದ ಯುವತಿಯೊಬ್ಬಳು ಅಲ್ಲಿಯೇ ಮೃತಪಟ್ಟಿದ್ದಾಳೆ. ಬಾತ್‌ರೂಮ್‌ನಲ್ಲಿದ್ದ ಗೀಸರ್ ನಿಂದ ಗ್ಯಾಸ್ ಸೋರಿಕೆಯಾಗಿ ಉಸಿರುಗಟ್ಟಿ ಮೃತಪಟ್ಟಿದ್ದಾಳೆ. ರಾಜೇಶ್ವರಿ (23) ಮೃತ ದುರ್ದೈವಿ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ಮೀನಾಕ್ಷಿನಗರದಲ್ಲಿ ಈ ದುರ್ಘಟನೆ ನಡೆದಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ವರಿ, ಅಣ್ಣನ ಮದುವೆಗೆ ರಜೆ ಹಾಕಿದ್ದಳು. ಇಂದು ಬೆಳಗ್ಗೆ ಸ್ನಾನ ಮಾಡಲು ಹೋದಾಗ ಗ್ಯಾಸ್ ಗೀಸರ್ ನಿಂದ ಸೋರಿಕೆಯಾದ ವಿಷ ಅನಿಲದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ತುಂಬ ಸಮಯ ಬಾತ್ ರೂಮ್‌ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರಾಜೇಶ್ವರಿ ಉಸಿರುಗಟ್ಟಿ ಮೃತಪಟ್ಟಿದ್ದಾಳೆ.
ಬಾತ್‌ರೂಮ್‌ನಿಂದ ಹೊರಬಾರದ ಕಾರಣಕ್ಕೆ ಬಾಗಿಲು ಬಡಿದಿದ್ದಾರೆ. ಆಗಲೂ ತೆರೆಯದೇ ಇದ್ದಾಗ ಬಾತ್ ರೂಮ್ ಬಾಗಿಲು ಒಡೆದು ನೋಡಿದಾಗ ರಾಜೇಶ್ವರಿ ಪ್ರಜ್ಞೆ ತಪ್ಪಿ ಬಿದ್ದಿರುವುದು ಕಂಡಿದೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆದಾಗಲೇ ರಾಜೇಶ್ವರಿ ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದ್ದಾರೆ. ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.