



ನವದೆಹಲಿ: ಉದ್ಯಮಿ ಮುಕೇಶ್ ಅಂಬಾನಿ ಹಾಗೂ ಅವರ ಕುಟುಂಬಕ್ಕೆ ಭಾರತ ಮಾತ್ರವಲ್ಲದೇ ವಿದೇಶದಲ್ಲಿಯೂ ಝೆಡ್ ಪ್ಲಸ್ (Z+) ಭದ್ರತೆ ನೀಡುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಸುಪ್ರೀಂಕೋರ್ಟ್ ಜಡ್ಜ್ ಗಳಾದ ಕೃಷ್ಣ ಮುರಾರಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ಪೀಠ ಈ ಆದೇಶ ಮಾಡಿದೆ. ಅಲ್ಲದೆ ಸರ್ಕಾರ ನೀಡುವ ಈ ಭದ್ರತೆಯ ವೆಚ್ಚವನ್ನು ಅಂಬಾನಿಯವೇ ಭರಿಸಬೇಕು ಎಂದು ಕೂಡ ಕೋರ್ಟ್ ಹೇಳಿದೆ.
ಮುಖೇಶ್ ಕುಟುಂಬದ 2 ರಿಂದ 6 ಮಂದಿಗೆ ಭದ್ರತಾ ಬೆದರಿಕೆ ಇದೆ. ಹೀಗಾಗಿ ಅವರೆಲ್ಲರಿಗೂ ದೇಶವಲ್ಲದೇ ವಿದೇಶದಲ್ಲಿಯೂ ರಕ್ಷಣೆ ನೀಡಬೇಕಾಗಿದೆ. ಭಾರತ ಅಥವಾ ವಿದೇಶದಲ್ಲಿ ಅಂಬಾನಿ ಕುಟುಂಬಕ್ಕೆ ಝೆಡ್ ಪ್ಲಸ್ ಭದ್ರತೆ ಒದಗಿದುವ ಸಂಪೂರ್ಣ ವೆಚ್ಚವನ್ನು ಅವರೇ ಭರಿಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.