logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗ್ಲೆನ್ ಮ್ಯಾಕ್ಸ್ವೆಲ್ ವಿದಾಯ: ಏಕದಿನ, ಟೆಸ್ಟ್ ಹಾಗೂ ಟಿ20 ಕ್ರಿಕೆಟ್ನಿಂದ ನಿವೃತ್ತಿ ಘೋಷಣೆ

ಟ್ರೆಂಡಿಂಗ್
share whatsappshare facebookshare telegram
3 Nov 2026
post image

ಮೆಲ್ಬೋರ್ನ್: ಆಸ್ಟ್ರೇಲಿಯಾದ ಸ್ಟಾರ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಮಂಗಳವಾರ ಬಿಡುಗಡೆಯಾದ 'ದಿ ಫೈನಲ್ ವರ್ಡ್' ಪಾಡ್ಕಾಸ್ಟ್ನಲ್ಲಿ ಮಾತನಾಡಿದ ಅವರು, ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಇದರೊಂದಿಗೆ ವಿಕ್ಟೋರಿಯಾ ತಂಡದ ಪರ ದೇಶೀಯ 50 ಓವರ್ ಹಾಗೂ ನಾಲ್ಕು ದಿನಗಳ ಪ್ರಥಮ ದರ್ಜೆ ಕ್ರಿಕೆಟ್ಗೂ ವಿದಾಯ ಹೇಳಿದ್ದಾರೆ. ಕ್ರಿಕೆಟ್ ಅಭಿಮಾನಿಗಳಲ್ಲಿ 'ದಿ ಬಿಗ್ ಶೋ' ಎಂದೇ ಗುರುತಿಸಿಕೊಂಡಿರುವ 38 ವರ್ಷದ ಮ್ಯಾಕ್ಸ್ವೆಲ್, ಆಸ್ಟ್ರೇಲಿಯಾ ಪರ 149 ಏಕದಿನ, 130 ಟಿ20 ಹಾಗೂ 7 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. 2015 ಮತ್ತು 2023ರ ಏಕದಿನ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ತಂಡದ ಭಾಗವಾಗಿದ್ದ ಅವರು, 2021ರ ಟಿ20 ವಿಶ್ವಕಪ್ ಗೆಲುವಿನಲ್ಲೂ ಪ್ರಮುಖ ಪಾತ್ರ ವಹಿಸಿದ್ದರು.

ತಮ್ಮ ನಿರ್ಧಾರದ ಬಗ್ಗೆ ಮಾತನಾಡಿದ ಮ್ಯಾಕ್ಸ್ವೆಲ್, ಅಂತಾರಾಷ್ಟ್ರೀಯ ಕ್ರಿಕೆಟ್ ಹಾಗೂ ವಿಕ್ಟೋರಿಯಾ ತಂಡದ ಪರ 50 ಓವರ್ ಮತ್ತು ನಾಲ್ಕು ದಿನಗಳ ಕೆಂಪು ಚೆಂಡಿನ ಕ್ರಿಕೆಟ್ಗೆ ಸಂಪೂರ್ಣವಾಗಿ ವಿದಾಯ ಹೇಳುತ್ತಿರುವುದಾಗಿ ತಿಳಿಸಿದ್ದಾರೆ.

ವೃತ್ತಿಜೀವನದ ಮುಂದಿನ ಕೆಲವು ಟಿ20 ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡಲು ದೇಹವನ್ನು ಸಜ್ಜುಗೊಳಿಸುವ ಅಗತ್ಯವಿದೆ. ಫಿಟ್ನೆಸ್ ಕಾಪಾಡಿಕೊಳ್ಳಲು ಹೆಚ್ಚಿನ ಸಮಯ ಮೀಸಲಿಡಬೇಕಾಗಿದೆ. ಹೀಗಾಗಿ ಉಳಿದಿರುವ ಟೂರ್ನಿಗಳ ಮೇಲೆ ಗಮನ ಹರಿಸಲು ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ಹೇಳಿದ್ದಾರೆ. ಏಕದಿನ ಕ್ರಿಕೆಟ್ನಲ್ಲಿ 3,990 ರನ್ ಹಾಗೂ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 2,897 ರನ್ ಗಳಿಸಿರುವ ಮ್ಯಾಕ್ಸ್ವೆಲ್, ಫೆಬ್ರವರಿಯಲ್ಲಿ ಶ್ರೀಲಂಕಾದಲ್ಲಿ ನಡೆದ ಟಿ20 ವಿಶ್ವಕಪ್ನಲ್ಲಿ ಒಮಾನ್ ವಿರುದ್ಧ ಆಸ್ಟ್ರೇಲಿಯಾ ಪರ ತಮ್ಮ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಡಿದ್ದರು.

ಟಿ20 ಕ್ರಿಕೆಟ್ನಲ್ಲಿ ಮ್ಯಾಕ್ಸ್ವೆಲ್ ಹಲವು ದಾಖಲೆಗಳನ್ನು ಮಾಡಿದ್ದಾರೆ. ಭಾರತದ ರೋಹಿತ್ ಶರ್ಮಾ ಅವರೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ತಲಾ ಐದು ಶತಕಗಳನ್ನು ಗಳಿಸಿದ ವಿಶ್ವದ ಇಬ್ಬರು ಆಟಗಾರರಲ್ಲಿ ಒಬ್ಬರಾಗಿದ್ದಾರೆ. ಬ್ಯಾಟಿಂಗ್ ಮಾತ್ರವಲ್ಲದೆ ತಮ್ಮ ಆಫ್ಸ್ಪಿನ್ ಬೌಲಿಂಗ್ ಮೂಲಕವೂ ಗಮನ ಸೆಳೆದಿರುವ ಅವರು, ಸೀಮಿತ ಓವರ್ಗಳ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 128 ವಿಕೆಟ್ಗಳನ್ನು ಪಡೆದಿದ್ದಾರೆ.

WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.