



ಕಾರ್ಕಳ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ, ಕ್ಷೇತ್ರ ಸಂಪನ್ಮೂಲ ಕೇಂದ್ರ ಕಾರ್ಕಳ ಹಾಗೂ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆ, ಕಾರ್ಕಳ ಇವರ ಆಶ್ರಯದಲ್ಲಿ ಪ್ರಾಥಮಿಕ ಶಾಲಾ ವಿಭಾಗದ ಬಾಲಕ ಬಾಲಕಿಯರ ಕಾರ್ಕಳ ವೃತ್ತ ಮಟ್ಟದ ಕ್ರೀಡಾಕೂಟವು ಸೆ.23ರಂದು ಆಂಗ್ಲ ಮಾಧ್ಯಮ ಶಾಲೆ, ಕಾರ್ಕಳದಲ್ಲಿ ನಡೆಯಿತು.
ಕ್ರೀಡಾಕೂಟದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ನಿಯತಿ ಶೆಟ್ಟಿಗಾರ್ (7ನೇ ತರಗತಿ) ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ, ಅನನ್ಯ ಪ್ರಭು (7ನೇ ತರಗತಿ) 100 ಮೀ ಓಟ ಮತ್ತು ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ, 200 ಮೀ ಓಟದಲ್ಲಿ ತೃತೀಯ ಸ್ಥಾನ, ಅಕ್ಷಯ ವಾಗ್ಲೆ (7ನೇ ತರಗತಿ) ಗುಂಡು ಎಸೆತ ಮತ್ತು ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ, ಮನ್ವಿತ್ (7ನೇ ತರಗತಿ) 80 ಮೀ ಹರ್ಡಲ್ಸ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆಯುವುದರೊಂದಿಗೆ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.
ಬಾಲಕರ ವಿಭಾಗದ 4100ಮೀ ರಿಲೇ ಓಟದಲ್ಲಿ ತೃತೀಯ ಸ್ಥಾನ, ಪಥ ಸಂಚಲನದಲ್ಲಿ ದ್ವಿತೀಯ ಸ್ಥಾನ ಹಾಗೂ ಅತ್ಯುತ್ತಮ ಸಮಯ ನಿರ್ವಹಣಾ ಪ್ರಶಸ್ತಿ ಪಡೆದಿರುತ್ತಾರೆ. ಸಾಧಕ ವಿದ್ಯಾರ್ಥಿಗಳಿಗೆ ಅಜೆಕಾರು ಪದ್ಮಗೋಪಾಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ಅಭಿನಂದಿಸಿ ಶುಭ ಹಾರೈಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.