



ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಮತ್ತಷ್ಟು ಇಳಿಕೆಯಾಗಿದ್ದು, ಆಭರಣ ಪ್ರಿಯರ ಮೊಗದಲ್ಲಿ ಸಂತಸ ಮೂಡಿದೆ.
ಮಾರುಕಟ್ಟೆಯಲ್ಲಿ ಇಂದು ಒಂದು ಗ್ರಾಂ 22 ಕ್ಯಾರಟ್ ಆಭರಣ ಚಿನ್ನದ ಬೆಲೆ ರೂ. 5,510 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) ರೂ. 6,011 ಆಗಿದೆ. ಇನ್ನು ಎಂಟು ಗ್ರಾಂ 22 ಕ್ಯಾರಟ್ ಆಭರಣ ಚಿನ್ನದ ಬೆಲೆ ರೂ. 44,080 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ ರೂ. 48,088 ಆಗಿದೆ.
ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 55,100 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 55,500 ರೂ. 55,100 ರೂ. 55,100 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 55,250 ರೂ. ಆಗಿದೆ.
ಬೆಳ್ಳಿ ಬೆಲೆಯಲ್ಲಿ 700 ರೂಪಾಯಿ ಇಳಿಕೆಯಾಗಿದ್ದು, ಒಂದು ಕೆಜಿ ಬೆಳ್ಳಿ ಬೆಲೆ ರೂ.77,300 ಆಗಿದೆ. ಪ್ರಮುಖವಾಗಿ ಬೆಳ್ಳಿ ದರವು ಭಾರತದಲ್ಲಿ ಅದರ ಅತಾರಾಷ್ಟ್ರೀಯ ದರದ ಮೇಲೆ ಅವಲಂಬಿತವಾಗಿರುತ್ತದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.