



ಹೆಬ್ರಿ: ಹೆಬ್ರಿ ತಾಲೂಕಿನ ಬೆಳ್ವೆ ಗ್ರಾಮದ ಗೋಳಿಯಂಗಡಿ ಲಕ್ಷೀ ಬಾರ್ ಆ್ಯಂಡ್ ರೆಸ್ಟೊರೆಂಟ್‌ನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಕ್ಯಾಶ್ ಕೌಂಟರ್ ನ ಡ್ರಾವರ್ ನಲ್ಲಿಟ್ಟಿದ್ದ 50 ಸಾವಿರ ರೂ. ನಗದು ಕಳವು ಮಾಡಿಕೊಂಡು ಹೋಗಿರುವ ಘಟನೆ ನಡೆದಿದೆ. ಈ ಬಗ್ಗೆ ಬಾರ್ ಮಾಲೀಕ ಕರುಣಾಕರ ಶೆಟ್ಟಿ ಪೊಲೀಸರಿಗೆ ದೂರು ನೀಡಿದ್ದಾರೆ. ಡಿ.10ರಂದು ರಾತ್ರಿ ಬಾರ್ ನ ಬಾಗಿಲು ಹಾಕಿ ಹೋಗಿದ್ದು, ಡಿ.11ರಂದು ಬೆಳಿಗ್ಗೆ ಬಂದು ನೋಡುವಾಗ ಯಾರೋ ಕಳ್ಳರು ಬಾರ್‌ನ ಹಿಂಬದಿಯ ಗೋಡೆ ಹಾಗೂ ಕಿಟಕಿಯನ್ನು ಒಡೆದು ಒಳಪ್ರವೇಶಿಸಿ, ಕ್ಯಾಶ್ ಕೌಂಟರ್ ನ ಡ್ರಾವರ್ ನಲ್ಲಿಟ್ಟಿದ್ದ 50 ಸಾವಿರ ರೂ. ನಗದನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.