logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಪಡಿತರ ಚೀಟಿದಾರರಿಗೆ ಗುಡ್‌ನ್ಯೂಸ್: ಇ-ಕೆವೈಸಿ ಗಡುವು ನವೆಂಬರ್ 30ರವರೆಗೆ ವಿಸ್ತರಣೆ

ಟ್ರೆಂಡಿಂಗ್
share whatsappshare facebookshare telegram
11 Nov 2026
post image

ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಪಡಿತರ ಚೀಟಿಗೆ ಇ-ಕೆವೈಸಿ (e-KYC) ಮಾಡಿಸಲು ನೀಡಲಾಗಿದ್ದ ಗಡುವನ್ನು ನವೆಂಬರ್ 30ರವರೆಗೆ ವಿಸ್ತರಿಸಿ ಆಹಾರ ಇಲಾಖೆ ಆದೇಶ ಹೊರಡಿಸಿದೆ.

ಈ ಹಿಂದೆ ನವೆಂಬರ್ 10 ಇ-ಕೆವೈಸಿ ಮಾಡಿಸಲು ಕೊನೆಯ ದಿನವಾಗಿತ್ತು. ಆದರೆ, ಫಲಾನುಭವಿಗಳಿಗೆ ಮತ್ತಷ್ಟು ಕಾಲಾವಕಾಶ ಕಲ್ಪಿಸುವ ಉದ್ದೇಶದಿಂದ ಗಡುವನ್ನು ವಿಸ್ತರಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

ಪಡಿತರ ಚೀಟಿದಾರರು ಇ-ಕೆವೈಸಿ ಪ್ರಕ್ರಿಯೆಯನ್ನು ಎರಡು ವಿಧಾನಗಳಲ್ಲಿ ಪೂರ್ಣಗೊಳಿಸಬಹುದು. ಮನೆಯಲ್ಲೇ ಕುಳಿತು ಅನ್ನಸೇವೆ ಆ್ಯಪ್ ಮೂಲಕ ಮೊಬೈಲ್‌ನಲ್ಲೇ ಇ-ಕೆವೈಸಿ ಮಾಡಿಸಿಕೊಳ್ಳಬಹುದು. ಅಥವಾ ಸಮೀಪದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪ್ರಕ್ರಿಯೆ ಪೂರ್ಣಗೊಳಿಸಬಹುದು. ನಿಗದಿತ ಅವಧಿಯೊಳಗೆ ಎಲ್ಲ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಇಲಾಖೆ ಮನವಿ ಮಾಡಿದೆ.

ನ್ಯಾಯಬೆಲೆ ಅಂಗಡಿಗಳ ಮುಂದೆ ಸರದಿಯಲ್ಲಿ ನಿಲ್ಲುವುದನ್ನು ತಪ್ಪಿಸುವ ಉದ್ದೇಶದಿಂದ ಆಹಾರ ಇಲಾಖೆ ಅನ್ನಸೇವೆ ಆ್ಯಪ್ ಸೌಲಭ್ಯವನ್ನು ರಾಜ್ಯದ ಎಲ್ಲ 31 ಜಿಲ್ಲೆಗಳಿಗೂ ವಿಸ್ತರಿಸಿದೆ. ಕೇಂದ್ರ ಸರ್ಕಾರದ ನಿಯಮದ ಪ್ರಕಾರ ಪ್ರತಿ ಐದು ವರ್ಷಕ್ಕೊಮ್ಮೆ ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.

ಹಿರಿಯ ನಾಗರಿಕರು ಹಾಗೂ ಮಕ್ಕಳ ಅನುಕೂಲಕ್ಕಾಗಿ ಮುಖ ಗುರುತಿಸುವಿಕೆ (Face Authentication) ಮೂಲಕ ದೃಢೀಕರಣ ಮಾಡುವ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಉದ್ಯೋಗ ಸೇರಿದಂತೆ ವಿವಿಧ ಕಾರಣಗಳಿಗಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗಿರುವವರು ಇ-ಕೆವೈಸಿಗಾಗಿ ತಮ್ಮ ಊರಿಗೆ ಹಿಂದಿರುಗುವ ಅನಿವಾರ್ಯತೆಯನ್ನೂ ಈ ವ್ಯವಸ್ಥೆ ತಪ್ಪಿಸಲಿದೆ.

ಅನ್ನಸೇವೆ ಆ್ಯಪ್ ಮೂಲಕ ಇ-ಕೆವೈಸಿ ಮಾಡುವುದು ಹೇಗೆ?

  1. ಮೊದಲು ಮೊಬೈಲ್‌ನಲ್ಲಿ ಅನ್ನಸೇವೆ ಆ್ಯಪ್ ತೆರೆಯಿರಿ. ಲಾಗಿನ್ ಆಯ್ಕೆಯಲ್ಲಿ ‘ಸ್ವಯಂ/ನಾಗರಿಕ’ ಎಂಬುದನ್ನು ಆಯ್ಕೆಮಾಡಿ.
  2. ಜಿಲ್ಲೆಗಳ ಪಟ್ಟಿಯಿಂದ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ, ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸಿ.
  3. ಪಡಿತರ ಚೀಟಿಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಿ, ಅದಕ್ಕೆ ಬರುವ ಒಟಿಪಿ (OTP) ನಮೂದಿಸಿ.
  4. ಮುಂದಿನ ಪುಟದಲ್ಲಿ ಪಡಿತರ ಚೀಟಿಯಲ್ಲಿರುವ ಕುಟುಂಬ ಸದಸ್ಯರ ವಿವರಗಳು ಕಾಣಿಸಿಕೊಳ್ಳುತ್ತವೆ. ಇ-ಕೆವೈಸಿ ಮಾಡಿಸಬೇಕಾದ ಸದಸ್ಯರನ್ನು ಆಯ್ಕೆಮಾಡಿ.
  5. ಆ್ಯಪ್‌ನಲ್ಲಿ ನೀಡುವ ಸೂಚನೆಗಳನ್ನು ಅನುಸರಿಸಿ ಮುಖ ಗುರುತಿಸುವಿಕೆ ಪ್ರಕ್ರಿಯೆ ಪೂರ್ಣಗೊಳಿಸಿ.
  6. ಕೊನೆಯಲ್ಲಿ ‘ಇ-ಕೆವೈಸಿ ಯಶಸ್ವಿ’ ಎಂಬ ಸಂದೇಶ ಕಾಣಿಸಿಕೊಂಡರೆ ನಿಮ್ಮ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದರ್ಥ.

ಈ ಹಿಂದೆ ಸಚಿವ ರಿಜ್ವಾನ್ ಅರ್ಷದ್ ಅವರು ಇ-ಕೆವೈಸಿ ಪ್ರಕ್ರಿಯೆಯನ್ನು ವಿವರಿಸುವ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಂಡಿದ್ದರು.

WhatsApp Image 2026-11-08 at 9.04.18 AM.jpeg
WhatsApp Image 2026-11-08 at 9.04.17 AM.jpeg
mudkuru indpe.jpg
WhatsApp Image 2026-11-08 at 9.04.18 AM (1).jpeg
WhatsApp Image 2026-11-09 at 7.15.05 PM.jpeg
WhatsApp Image 2026-11-08 at 9.04.18 AM (2).jpeg
WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.