logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ರಾಜ್ಯಾದ್ಯಂತ ಏಕ ಕಾಲಕ್ಕೆ ಎಲ್ಲಾ ಜಿಲ್ಲೆಗಳಲ್ಲೂ ನಡೆದ ಜನತಾ ದರ್ಶನಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ-ಅಧಿಕಾರಿಗಳಿಂದ ಸಮಾಧಾನಕರ ಸ್ಪಂದನೆ

ಟ್ರೆಂಡಿಂಗ್
share whatsappshare facebookshare telegram
25 Sept 2023
post image

ಅಧಿಕಾರಿಗಳ ಕಾರ್ಯಕ್ಷಮತೆ ಮತ್ತು ಸ್ಪಂದನೆಗೆ ಸಾರ್ವಜನಿಕರ ಮೆಚ್ಚುಗೆ

ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದ ಊಟಕ್ಕೂ ತೆರಳದೆ ಜನತಾ ದರ್ಶನದ ಸ್ಥಳದಲ್ಲೇ ಊಟ ಮಾಡುತ್ತಾ ಸ್ಪಂದಿಸಿದ ಅಧಿಕಾರಿ-ಸಿಬ್ಬಂದಿ

ಅಚ್ಚುಕಟ್ಟಾಗಿ, ಶಿಸ್ತು ಬದ್ದವಾಗಿ ನಡೆದ ಜನತಾ ದರ್ಶನ

ಎಲ್ಲಾ ಪಕ್ಷದ ಶಾಸಕರು-ಜನಪ್ರತಿನಿಧಿಗಳು ಜನತಾ ದರ್ಶನದಲ್ಲಿ ಭಾಗಿ

ಮನೆ-ಮನಗಳನ್ನು ತಲುಪಿದ ಜನತಾ ದರ್ಶನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊದಲ ಸೂಚನೆಗೆ ಸಿಕ್ಕ ಯಶಸ್ಸು

ಬೆಂಗಳೂರು ಸೆ 25: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಮೊಟ್ಟ ಮೊದಲ ಬಾರಿಗೆ ರಾಜ್ಯಾದ್ಯಂತ ಏಕ‌ಕಾಲಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ನಡೆದ ಜನತಾ ದರ್ಶನಕ್ಕೆ ಸಾರ್ವಜನಿಕರು ಮತ್ತು ಅಧಿಕಾರಿಗಳಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲೂ ಜನತಾದರ್ಶನ ನಡೆದಿದೆ.

ರಾಜ್ಯಾದ್ಯಂತ 6684 ಅಹವಾಲು ಮತ್ತು ಮನವಿಗಳು ಸ್ವೀಕೃತಗೊಂಡು 21 ಕ್ಕೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ. ಉಳಿದಂತೆ 6663 ಅರ್ಜಿ, ಅಹವಾಲುಗಳು ದಾಖಲಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ರವಾನಿಯಾಗಿವೆ. (ಇದರಲ್ಲಿ ಮೌಖಿಕ ದೂರುಗಳು ಮತ್ತು ಪರಿಹಾರಗಳು ದಾಖಲಾಗಿಲ್ಲ).

ಸ್ವೀಕರಿಸಲಾಗಿರುವ ಅಹವಾಲುಗಳಲ್ಲಿ ಕಂದಾಯ ಇಲಾಖೆಯದ್ದೇ ಸಿಂಹಪಾಲು ಆಗಿವೆ. ಸಂಜೆ 6 ಗಂಟೆವರೆಗೂ ಸಿಕ್ಕಿರುವ ಅಂಕಿ ಅಂಶಗಳ ಪ್ರಕಾರ 2100 ಕ್ಕೂ ಹೆಚ್ಚು ಅಹವಾಲುಗಳು ಕಂದಾಯ ಇಲಾಖೆಗೆ ಸೇರಿದ್ದಾಗಿವೆ. ನಂತರದ ಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸೇರಿದ್ದಾಗಿದ್ದ ಸಾವಿರಕ್ಕೂ ಅಧಿಕ ಅಹವಾಲುಗಳು ಈ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಮೂರನೇ ಅತಿ ಹೆಚ್ಚು ಅಹವಾಲುಗಳು ನಗರಾಡಳಿತಕ್ಕೆ ಸಂಬಂಧಿಸಿದ್ದಾಗಿವೆ.

ಜಿಲ್ಲಾಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಎದುರಿಗೆ ಅತಿ ಹೆಚ್ಚು ಸಮಸ್ಯೆಗಳು ಮತ್ತು ಅಹವಾಲುಗಳು ಸಲ್ಲಿಕೆಯಾಗಿವೆ. ಉಳಿದಂತೆ ಜಿಲ್ಲಾಧಿಕಾರಿಗಳ ಮುಂದೆ ಸಲ್ಲಿಕೆಯಾದವುಗಳಾಗಿವೆ. ಜಿಲ್ಲಾ ರಕ್ಷಣಾಧಿಗಳ ಎದುರಿಗೆ ಕೆಲವು ಜಿಲ್ಲೆಗಳನ್ನು ಹೊರತು ಪಡಿಸಿದರೆ ಹೆಚ್ಚಿನ‌ ಕಡೆ ಅತಿ ಕಡಿಮೆ ಅಹವಾಲುಗಳು ಸಲ್ಲಿಕೆ ಆಗಿರುವುದು ಆಶ್ಚರ್ಯದ ಜತೆಗೆ ವಿಶ್ಲೇಷಣೆ ಮಾಡಬೇಕಾದ ಸಂಗತಿಯಾಗಿದೆ.

ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಹವಾಲುಗಳು ದಾಖಲಾಗಿವೆ. 774 ಅಹವಾಲುಗಳ ಮೂಲಕ ಹಾಸನ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೆ, 432 ಅಹವಾಲುಗಳ ಮೂಲಕ ಹಾಸನ ಎರಡನೇ ಸ್ಥಾನದಲ್ಲಿ, 423 ಅಹವಾಲುಗಳ ಮೂಲಕ ಕೋಲಾರ ಜಿಲ್ಲೆ ಮೂರನೇ ಸ್ಥಾನದಲ್ಲಿದೆ.

ಒಟ್ಟು ಅರ್ಜಿ ರೂಪದಲ್ಲಿ ಬಂದ ಅಹವಾಲುಗಳನ್ನು ದಾಖಲಿಸಿಕೊಳ್ಳುವ ಮತ್ತು ಸ್ಥಳದಲ್ಲೇ ಪರಿಹಾರಕ್ಕೆ ಪ್ರಯತ್ನಿಸುವ ಪ್ರಕ್ರಿಯೆ ಒಂದು ಕಡೆ ನಡೆದಿದೆ. ಮತ್ತೊಂದು ಕಡೆ ಅರ್ಜಿ ಇಲ್ಲದೆ ಮೌಖಿಕವಾಗಿ ಬಂದ ಅಹವಾಲುಗಳನ್ನೂ ದಾಖಲಿಸಿಕೊಳ್ಳುವ ಜತೆಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ.

ಮೌಖಿಕವಾಗಿ ದೂರು ಕೊಡಲು ಬಂದವರನ್ನು ಕುಳ್ಳಿರಿಸಿ ಅಧಿಕಾರಿ ಮತ್ತು ಸಿಬ್ಬಂದಿಯೇ ಅಹವಾಲುಗಳನ್ನು ಬರೆದು, ಬಳಿಕ ಅದನ್ನು ಓದಿಹೇಳಿ ಅರ್ಜಿದಾರರಿಂದ ಸಹಿ ಪಡೆದು ದಾಖಲಿಸಿಕೊಳ್ಳುವ ಪ್ರಯತ್ನಗಳೂ ನಡೆದಿವೆ.

ರಾಜ್ಯಾದ್ಯಂತ ಏಕ ಕಾಲಕ್ಕೆ ನಡೆಸಿದ ಜನತಾ ದರ್ಶನ ನಮಗೂ ಮೊದಲ ಅನುಭವ. ನಾವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ರೀತಿಯ ಪ್ರತಿಕ್ರಿಯೆ ಸಾರ್ವಜನಿಕರಿಂದ ಸಿಕ್ಕಿದೆ. ಅಧಿಕಾರಿಗಳ‌ ಸ್ಪಂದನೆ ಕೂಡ ಸಮಾಧಾನಕರವಾಗಿದೆ. ಇವತ್ತಿನ ಅನುಭವದ ಹಿನ್ನೆಲೆಯಲ್ಲಿ ಮುಂದಿನ‌ ಜನತಾ ದರ್ಶನದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸುವ ಪ್ರಯತ್ನ ಮಾಡುತ್ತೇವೆ ಎನ್ನುವ ಅಭಿಪ್ರಾಯಗಳು ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳಿಂದ ವ್ಯಕ್ತವಾಗಿದೆ.

ಇತರೆ ಹೈಲೈಟ್ಸ್

ಅನಿವಾರ್ಯ ಕಾರಣಗಳಿಂದ ಗದಗ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಜನತಾ ದರ್ಶನ ನಡೆಯಲಿಲ್ಲ. ಬೆಳಗಾವಿಯಲ್ಲಿ ನಾಳೆ (ಸೆ 26 ರ ಮಂಗಳವಾರ) ನಡೆಯಲಿದೆ

ಮೈಸೂರು ಜಿಲ್ಲೆಯ ಜನತಾ ದರ್ಶನದಲ್ಲಿನ ಕುಂದುಕೊರತೆ ಮನವಿಗಳನ್ನು IPGRS ನಲ್ಲಿ upload ಮಾಡುವಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದೆ. ಎಲ್ಲಾ ಅರ್ಜಿಗಳನ್ನು Manually ಸ್ವೀಕರಿಸಲಾಗಿದ್ದು ಬಳಿಕ upload ಮಾಡಲಿದ್ದಾರೆ

ಹಾವೇರಿ ಜಿಲ್ಲೆಯಲ್ಲಿ ಬೆಳೆ ಹಾನಿ ಪರಿಹಾರದ ಸಂಬಂಧ ಸಾವಿರಾರು ಅರ್ಜಿಗಳು ಬಂದಿವೆ. ಸ್ವೀಕರಿಸುವ ವೇಳೆ ಕೆಲವು ಅನಾನುಕೂಲಗಳು ಸಂಭವಿಸಿದ್ದರಿಂದ ಅವುಗಳನ್ನೂ upload ಮಾಡಲು ಸಾಧ್ಯವಾಗಿಲ್ಲ

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.