



ಹೆಬ್ರಿ : ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೆಜು ಹೆಬ್ರಿ ಇಲ್ಲಿ ಗೋರಥ ಪೂಜೆ ನಡೆಯಿತು.
ಗೋ ಸೇವಾ ಗತಿವಿಧಿ ಕರ್ನಾಟಕ ಇದರ ಆಶ್ರಯದಲ್ಲಿ ಶ್ರೀ ರಾಧಾ ಸುರಭಿ ಗೋ ಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನ ಬಂಟ್ವಾಳ ಇವರ ಸಂಚಾರಿ ಗೋರಥ ಪೂಜೆಯು ಕಾಲೇಜಿನ ಮೈದಾನದಲ್ಲಿ ನಡೆಯಿತು. ಗೋವಿಗೆ ವಿಶೇಷ ಪೂಜೆ ಮತ್ತು ಪರಮಾತ್ಮನಾದ ಶ್ರಿ ಕೃಷ್ಣ ದೇವರಿಗೆ ಪೂಜೆಯನ್ನು ಸಲ್ಲಿಸಿ ಸ್ವದೇಶಿ ಗೋವುಗಳ ರಕ್ಷಣೆ ಮತ್ತು ಗೋವಿನ ಉತ್ಪನ್ನಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಕ್ಯಾಂಪಸ್ ಮೇಲ್ವಿಚಾರಕರಾದ ರಾಘವೇಂದ್ರ ಮತ್ತು ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.