logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಸರಕಾರದ ನೌಕರರು ತಂಡವಾಗಿ ಕೆಲಸ ನಿರ್ವಹಿಸಿದಾಗ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲು ಸಾಧ್ಯ: ಡಾ. ನವೀನ್ ಭಟ್

ಟ್ರೆಂಡಿಂಗ್
share whatsappshare facebookshare telegram
11 May 2022
post image

ಉಡುಪಿ, ಸರಕಾರದ ಯೋಜನೆ, ಕಾರ್ಯಕ್ರಮಗಳು ಹಾಗೂ ನಿಯಮಗಳನ್ನು ಅನುಷ್ಠಾನಗೊಳಿಸಲು ಎಲ್ಲಾ ಇಲಾಖೆಯ ಅಧಿಕಾರಿಗಳು ಒಂದು ತಂಡವಾಗಿ ಕೂಡಿ ಕೆಲಸಮಾಡಿದಾಗ ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ಒದಗಿಸಲು ಸಾಧ್ಯ ಎಂದು ನಿಕಟಪೂರ್ವ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಹಕಾಧಿಕಾರಿ ಡಾ. ನವೀನ್ ಭಟ್ ಹೇಳಿದರು. ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಸರ್ಕಾರಿ ಕೆಲಸಗಳಲ್ಲಿ ವರ್ಗಾವಣೆ ಎಂಬುವುದು ಸಹಜ. ಕಳೆದ ಒಂದೂವರೆ ವರ್ಷಕ್ಕಿಂತ ಹೆಚ್ಚು ಅವಧಿಯಲ್ಲಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಯಶಸ್ಸು ಹೊಂದಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕೊಡುಗೆ ಅಪಾರ ಎಂದರು. ಒಬ್ಬ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಉತ್ತಮವಾಗಿ ಕಾರ್ಯನಿರ್ವಹಿಸಬೇಕೆಂದರೆ ಅದಕ್ಕೆ ಕಂದಾಯ ಇಲಾಖೆ ಮತ್ತು ಜಿಲ್ಲಾಧಿಕಾರಿಯವರ ಸಹಕಾರ ಬಹಳ ಮುಖ್ಯವಾದದ್ದು. ನನ್ನೆಲ್ಲಾ ಕೆಲಸಗಳಿಗೂ ಬೆನ್ನೆಲುಬಾಗಿ ನಿಂತು ಅಭಿವೃದ್ಧಿಗೆ ಇವರು ಸಹಕರಿಸಿದ್ದಾರೆ ಎಂದರು. ಯಾವುದೇ ಕ್ಷೇತ್ರದಲ್ಲಿಯೂ ಅಭಿವೃದ್ಧಿ ಸಾಧ್ಯವಾಗಬೇಕಾದರೆ ಅದಕ್ಕೆ ಪ್ರತಿಯೊಬ್ಬರ ಸಹಕಾರ ಬಹಳ ಅತ್ಯಗತ್ಯ. ಆ ನಿಟ್ಟಿನಲ್ಲಿ ಮುಂದೆಯೂ ನಿಮ್ಮೆಲ್ಲರ ಸಹಕಾರದಿಂದ ಜಿಲ್ಲೆಯ ಅಭಿವೃದ್ಧಿ ಕಾರ್ಯವಾಗಲಿ ಎಂದರು. ಸಂಜೀವಿನಿ ಸಂಘ, ಎಸ್.ಎಲ್.ಆರ್.ಎಮ್ ಸಂಘ ಹಾಗೂ ಎಸ್.ಬಿ.ಎಮ್ ಸಂಘಗಳು ಪರಿಣಾಮಕಾರಿಯಾಗಿ ಕೆಲಸಗಳನ್ನು ಮಾಡಬೇಕು. ನಿಮ್ಮೆಲ್ಲಾ ಬೇಡಿಕೆಗಳನ್ನು ಕೇಳಿ ಪಡೆದುಕೊಳ್ಳಿ ಎಂದರು. ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಎಲ್ಲಾ ಕಾರ್ಯಕ್ರಮಗಳಲ್ಲಿಯೂ ನಾವು ಜೊತೆ ಜೊತೆಯಾಗಿ ಭಾಗವಹಿಸುತ್ತಿದ್ದೆವು. ಅಕ್ಕಪಕ್ಕದಲ್ಲಿಯೇ ಕುಳಿತುಕೊಳ್ಳುತ್ತಿದ್ದೆವು. ನಮ್ಮಿಬ್ಬರಲ್ಲಿ ಸೋದರ ಭಾಂದವ್ಯವಿತ್ತು. ಯಾವುದೇ ಅಭಿವೃದ್ಧಿ ಕಾರ್ಯಗಳಲ್ಲಿ ಸಮಸ್ಯೆ ಇದ್ದರೂ ಕೂಡ ಅದನ್ನು ಮಾತುಕತೆಯ ಮೂಲಕ ತಕ್ಷಣ ಬಗೆ ಹರಿಸುತ್ತಿದ್ದೆವು ಎಂದ ಅವರು, ನವೀನ್ ಭಟ್‌ರವರು ಎಲ್ಲಾ ಅಧಿಕಾರಿಗಳನ್ನು ಕೂಡ ಪ್ರೋತ್ಸಾಹಿಸಿ ಕೆಲಸ ಮಾಡಿಸುತ್ತಿದ್ದರು. ಕೊರೋನಾ ಸಂದರ್ಭದಲ್ಲಿಯೂ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದ್ದಾರೆ. ಉತ್ತಮ ನಾಯಕತ್ವದ ಗುಣವನ್ನು ಹೊಂದಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದರು. ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ಸೇವೆ ಸಲ್ಲಿಸುವವರು ಬುದ್ಧಿವಂತರೇ ಆಗಿರುತ್ತಾರೆ. ಆದರೆ ಬುದ್ಧಿವಂತಿಕೆಯ ಜೊತೆಗೆ ಹೃದಯವಂತಿಕೆಯಲ್ಲಿ ಕೆಲಸ ಮಾಡುವವರಲ್ಲಿ ನವೀನ್ ಭಟ್ ಕೂಡ ಒಬ್ಬರು. ಎಲ್ಲರನ್ನು ಒಗ್ಗೂಡಿಸಿ ಉತ್ತಮ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿದ್ದರು ಎಂದರು. ಕಾರ್ಯಕ್ರಮದಲ್ಲಿ ನೂತನ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕಿರಣ್ ಪಡ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಪ್ರಸನ್ನ ಭಟ್ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.