logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರಕಾರಿ ವೈದ್ಯಕೀಯ ಕಾಲೇಜ್ ಮಾಡುವ ಯೋಚನೆ ಇದೆ ಉನ್ನತ ಶಿಕ್ಷಣ ಸಚಿವ ಡಾ| ಅಶ್ವಥ್ ನಾರಾಯಣ

ಟ್ರೆಂಡಿಂಗ್
share whatsappshare facebookshare telegram
23 Oct 2021
post image

ಕುಂದಾಪುರ: ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರಕಾರಿ ವೈದ್ಯಕೀಯ ಕಾಲೇಜ್ ಮಾಡುವ ಯೋಚನೆ ಇದೆ ಎಂದು ಉನ್ನತ ಶಿಕ್ಷಣ ಸಚಿವ ಡಾ| ಅಶ್ವಥ್ ನಾರಾಯಣ ಹೇಳಿದರು

ಶನಿವಾರ ಕೋಟೆಶ್ವರದಲ್ಲಿ ಮಾತನಾಡಿದ ಅವರು ಭಾರತ ಸರಕಾರ ಮತ್ತು ರಾಜ್ಯ ಸರಕಾರಗಳ ಅನುದಾನದೊಂದಿಗೆ ಉಡುಪಿಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಬೇಡಿಕೆ ಇದೆ. ಶೀಘ್ರದಲ್ಲಿ ನಿರ್ಣಯ ಕೈಗೊಳ್ಳುತ್ತೇವೆ ಎಂದರು

ಕರ್ನಾಟಕ ರಾಜ್ಯದಲ್ಲಿ ೮೫% ಮೊದಲ ಡೋಸ್ ಹಾಗೂ ೪೫% ಎರಡನೇ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಎರಡನೇ ಡೋಸ್ ನಲ್ಲಿ ದೇಶದಲ್ಲೇ ಕರ್ನಾಟಕ ಮುಂಚೂಣಿಯಲ್ಲಿದೆ. ಮೊದಲ ಡೋಸ್ ನೀಡುವಿಕೆಯಲ್ಲಿ ಐದನೇ ಸ್ಥಾನದಲ್ಲಿದೆ

ದುಬೈ, ಮಧ್ಯಪ್ರಾಚ್ಯ ದೇಶದಲ್ಲಿ ಕರ್ನಾಟಕದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ಉತ್ತಮ ಸಾಧನೆ ಮಾಡಿರುವುದರಿಂದ ಹೊರದೇಶಗಳಲ್ಲಿ ಕರ್ನಾಟಕದಲ್ಲಿ ವಿದ್ಯಾಭ್ಯಾಸ ಮಾಡಿದವರಿಗೆ ಬೇಡಿಕೆ ಇದೆ.

ಜಗ್ಗತ್ತಿನಲ್ಲಿ ಕರ್ನಾಟಕ ಶಿಕ್ಷಣ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿದ್ದು, ಇನ್ನು ಹೆಚ್ಚಿನ ಕ್ರಾಂತಿ ಮಾಡಲು ನಮ್ಮ ಸರಕಾರ ವಿನೂತನ ಯೋಜನೆಗಳನ್ನು ವಿದ್ಯಾರ್ಥಿಗಳಿಗೆ ರೂಪಿಸುತ್ತಿದೆ ಎಂದು ನುಡಿದರು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸುರೇಶ್ ಶೆಟ್ಟಿ ಗುರ್ಮೆ, ಮುಖಂಡರಾದ ರಾಜೇಶ್ ಕಾವೇರಿ ಮೊದಲಾದವರು ಉಪಸ್ಥಿತರಿದ್ದರು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.