



ರಾಜ್ಯ ಸರ್ಕಾರವು ಧಾರ್ಮಿಕ ಕಟ್ಟಡಗಳ ತೆರವು ಕುರಿತಂತೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ರಾಜ್ಯದಲ್ಲಿ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ತಡೆಯಲು ರಾಜ್ಯ ಸರ್ಕಾರವು ಕರ್ನಾಟಕ ಧಾರ್ಮಿಕ ಕಟ್ಟಡಗಳ ಸಂರಕ್ಷಣೆ ವಿಧೇಯಕ 2021 ನ್ನು ಮಂಡಿಸಿದೆ.
ಕಾಯಿದೆ ಜಾರಿಯಾಗುವ ಕ್ಷಣದವರೆಗೂ ಅಸ್ತಿತ್ವದಲ್ಲಿರುವ ಧಾರ್ಮಿಕ ಕಟ್ಟಡಗಳಿಗೆ ಸಂರಕ್ಷಣೆ ನೀಡುವ ಮಸೂದೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದ್ದು, ವಿಧೇಯಕ ಜಾರಿಯಾದ ಕ್ಷಣದಿಂದ ರಾಜ್ಯ ಸರ್ಕಾರವ ಅಥವಾ ಯಾವುದೇ ಸ್ಥಳೀಯ ಪ್ರಾಧಿಕಾರವು ಭವಿಷ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಧಾರ್ಮಿಕ ಕಟ್ಟಡವನ್ನು ನಿರ್ಮಿಸಲು ಅವಕಾಶ ನೀಡುವಂತಿಲ್ಲ ಎಂದು ರಾಜ್ಯ ಸರ್ಕಾರ ವಿಧೇಯಕದಲ್ಲಿ ಮಂಡಿಸಿದೆ. ನಂಜನಗೂಡು ದೇವಾಲಯ ತೆರವಿಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ನೂತನ ಕಾಯಿದೆ ಅನುಷ್ಠಾನ ಬರುವವರೆಗೂ ನಿರ್ಮಾಣಗೊಂಡಿರುವ ಎಲ್ಲಾ ದೇವಾಲಯಗಳಿಗೂ ರಕ್ಷಣೆ ನೀಡುವ ಅಂಶವನ್ನು ವಿಧೇಯಕದಲ್ಲಿ ಸೇರಿಸಿದೆ. ಎಂದು ತಿಳಿಸಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.