logo
WhatsApp Image 2026-04-02 at 14.46.04.jpeg
hindalco everlast.jpeg

ಸರ್ಕಾರಿ ಶಾಲಾ ಮಕ್ಕಳ ಮೊಟ್ಟೆಗೆ ಕತ್ತರಿ ಹಾಕಿದ ಸರ್ಕಾರ

ಟ್ರೆಂಡಿಂಗ್
share whatsappshare facebookshare telegram
22 Jun 2023
post image

ಬೆಂಗಳೂರು: ಮಧ್ಯಾಹ್ನದ ಬಿಸಿಯೂಟದೊಂದಿಗೆ ಶಾಲಾ ಮಕ್ಕಳಿಗೆ ನೀಡುತ್ತಿದ್ದ ಮೊಟ್ಟೆಗೆ ಸರ್ಕಾರ ಕತ್ತರಿ ಹಾಕಿದೆ. ಇಲ್ಲಿಯ ವರೆಗೂ ವಾರಕ್ಕೆ 2 ದಿನ ಮೊಟ್ಟೆ ನೀಡಲಾಗುತ್ತಿತ್ತು. ಆದರೆ ಇನ್ನು ಮುಂದೆ ವಾರಕ್ಕೆ 1 ಮೊಟ್ಟೆ ಮಾತ್ರ ನೀಡಲು ಶಿಕ್ಷಣ ಇಲಾಖೆ ಆದೇಶಿಸಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ವಾರಕ್ಕೆ 2 ದಿನ ಮೊಟ್ಟೆ ಕೊಡಲು ನಿರ್ಧರಿಸಲಾಗಿತ್ತು. ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆ ಹಣ್ಣು, ಚಿಕ್ಕಿ ನೀಡಲಾಗುತ್ತಿತ್ತು. ಆದರೆ ಈಗ ಒಂದು ದಿನದ ಮೊಟ್ಟೆಗೆ ಸರ್ಕಾರ ಕತ್ತರಿ ಹಾಕಿದೆ. ಈಗಾಗಲೇ ಶಾಲೆಗಳು ಪ್ರಾರಂಭಗೊಂಡು 25 ದಿನ ಆಗಿದ್ದು ಶಾಲೆಗಳಿಗೆ ಇನ್ನೂ ಮೊಟ್ಟೆ ನೀಡಿಲ್ಲ.

ಶಿಕ್ಷಣ ಇಲಾಖೆ ಆದೇಶ ಪ್ರಕಟವಾದ ಬೆನ್ನಲ್ಲೇ ವಾರದಲ್ಲಿ ಎರಡು ದಿನ ಮೊಟ್ಟೆ ಕೊಡುವುದಕ್ಕೂ ಸರ್ಕಾರಕ್ಕೆ ಕಷ್ಟವಾಗಿದೆಯೇ? ಮಕ್ಕಳ ಪೌಷ್ಠಿಕಾಂಶದ ಮೊಟ್ಟೆ ಮೇಲೂ ಸರ್ಕಾರದ ಕಣ್ಣು ಬಿದ್ದಿದ್ಯಾ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆ ಶುರುವಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.