logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಅಮೃತ ಮಹೋತ್ಸವ ಸಂಭ್ರಮ

ಟ್ರೆಂಡಿಂಗ್
share whatsappshare facebookshare telegram
30 Jan 2024
post image

ಕಾರ್ಕಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಆಮೃತ ಮಹೋತ್ಸವ ಸಂಭ್ರಮಾಚರಣೆಯು ಫೆ.೨ ಮತ್ತು ೩ ರಂದು ನಡೆಯಲಿದೆ ಎಂದು ಅಮೃತಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಸದಾನಂದ ಸಾಲಿಯಾನ್ ತಿಳಿದರು. ಜ. ೩೦ ರಂದು ಕಾರ್ಕಳ ಹೋಟೆಲ್ ಪ್ರಕಾಶ್‌ನಲ್ಲಿ ನಡೆದ ಪತ್ರಿಕಾಗೊಷ್ಟಿಯಲ್ಲಿ ಮತನಾಡಿದ ಅವರು ೧೯೪೭ ರ ಸ್ವಾತಂತ್ರ್ಯಪೂರ್ವದಲ್ಲಿ ಆರಂಭವಾದ ಶಾಲೆಯಲ್ಲಿ ಸುವರ್ಣ ಮಹೋತ್ಸವ, ವಜ್ರಮಹೋತ್ಸವ ಆಚರಿಸಲಾಗಿದ್ದು ಇದೀಗ ಅಮೃತಮಹೋತ್ಸವವನ್ನು ಆಚರಿಸಲಗುತ್ತಿದೆ ಎಂದರು. ವಿಭಿನ್ನ ರೀತಿಯಲ್ಲಿ ಅಮೃತಮಹೋತ್ಸವವನ್ನು ಆಚರಿಸುವ ಉದ್ದೇಶದಿಂದ ಫೆ. ೨ ರಂದು ಬೆಳಿಗ್ಗೆ ೮:೩೦ಕ್ಕೆ ಅಮೃತ ಮಹೋತ್ಸವ ಪುರಮೆರವಣಿಗೆ ಜಾರ್ಕಳದಿಂದ ಶಾಲೆಯವರೆಗೆ ನಡೆಯಲಿದೆ. ಈ ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು, ಭಜನಾ ತಂಡಗಳು, ವಿವಿಧ ಬಗೆಯ ಟ್ಯಾಬ್ಲೋಗಳು ಭಾಗವಹಿಸಲಿವೆ. ಕಾರ್ಕಳ ವಿಶಾಲ್ ಮೋಟರ್‍ಸ್ ಮಾಲಕರಾದ ಜೀವನ್‌ದಾಸ್ ಅಡ್ಯಂತಾಯ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬೈಲೂರು ಬೀದಿ ಇಲ್ಲಿಯ ಜೀರ್ಣೊದ್ಧಾರ ಸಮಿತಿಯ ಗೌರವಾಧ್ಯಕ್ಷ ಕರುಣಾಕರ ಹೆಗ್ಡೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ಪ್ರತಿಭಾಪುರಸ್ಕಾರ ಸಭಾ ಕಾರ್ಯಕ್ರಮ ನಡೆಯಲಿದ್ದು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸುವ ಕಾರ್ಯಕ್ರಮ ನಡೆಯಲಿದೆ ಎಂದರು. ರಾತ್ರಿ ೭.೦೦ ಗಂಟೆಗೆ ಅಮೃತ ಮಹೋತ್ಸವ ಸಂಭ್ರಮದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಶ್ರೀಮತಿ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅಮೃತ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಉಪಸ್ಥಿತರಿದ್ದಾರೆ. ಶಾಸಕ ವಿ. ಸುನಿಲ್ ಕುಮಾರ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಅಮೃತ ಸೌಧದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗ್ಡೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಶಾಲೆಗೆ ಹಾಕಲಾದ ಇಂಟರ್‌ಲಾಕ್ ಉದ್ಘಾಟನೆ, ಆಟದ ಮೈದಾನ ಉದ್ಘಾಟನೆ ದಾನಿಗಳಿಂದ ನಡೆಯಲಿದೆ ಎಂದು ಅವರು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಶಾಸಕ ಎಸ್.ಎಲ್.ಭೋಜೆ ಗೌಡ, ಡಾ|| ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ಬೈಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜಾತ, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ|| ಎಮ್. ಟಿ. ರೇಜು, ಜಿಲ್ಲಾಧಿಕಾರಿ, ಡಾ|| ಕೆ. ವಿದ್ಯಾಕುಮಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಪೊಲೀಸ್ ಅಧೀಕ್ಷಕರಾದ ಡಾ|| ಅರುಣ ಕೆ., ಉಪನಿರ್ದೇಶಕರಾದ ಗಣಪತಿ ಕೆ., ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ ಬಿ.ಎ., ವಿಶೇಷ ಅಹ್ವಾನಿತರಾಗಿ ಅಕ್ಷರ ಸಂತ ಹರೇಕಳ ಹಾಜಬ್ಬ, ಕು| ಅಕ್ಷಯ ಗೋಖಲೆ, ಕಾರ್ಕಳ ಮತ್ತಿತರರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಹಾಗೂ ಸೇವೆ ಸಲ್ಲಿಸಿದ ಗುರುಗಳಿಗೆ ಗುರುವಂದನಾ ಕಾರ್ಯಕ್ರಮ, ಪ್ರಮುಖ ದಾನಿಗಳಿಗೆ, ನಿಕಟಪೂರ್ವ ಎಸ್.ಡಿ.ಎಂ.ಸಿ ಅಧ್ಯಕ್ಷರುಗಳಿಗೆ ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರುಗಳಿಗೆ, ಸಾಧಕ ವಿದ್ಯಾರ್ಥಿ ಹಾಗೂ ಹಳೆವಿದ್ಯಾರ್ಥಿಗಳಿಗೆ ಗೌರವಾರ್ಪಣಾ ಕಾರ್ಯಕ್ರಮ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ ೬:೦೦ರಿಂದ ಅಂಗನವಾಡಿ ಪುಟಾಣಿಗಳಿಂದ ನೃತ್ಯ ಕಲರವ ಹಾಗೂ ಶಾಲಾ ಮಕ್ಕಳಿಂದ ನೃತ್ಯ ವೈಭವ, ರಾತ್ರಿ ಗಂಟೆ ೧೦:೦೦ರಿಂದ ಶಾಲಾ ಮಕ್ಕಳಿಂದ ಪೌರಾಣಿಕ ಯಕ್ಷಗಾನ ಮೀನಾಕ್ಷಿ ಕಲ್ಯಾಣ ಪ್ರದರ್ಶನಗೊಳ್ಳಲಿದೆ. ಫೆ. ೩ರಂದು ಹಳೆವಿದ್ಯಾರ್ಥಿಗಳ ಅಮೃತ ಸಂಭ್ರಮ ಕಾರ್ಯಕ್ರಮ ನಡೆಯಲಿದೆ. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಆನಂದ ಪೂಜಾರಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ತುಳು ನಾಟಕ ಮತ್ತು ಚಲನಚಿತ್ರ ನಟ ಅರವಿಂದ ಬೋಳಾರ್ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಾರ್ಕಳ ರಾಜಸೂಯ ಯಾಗಶಾಲೆಯ ವೇ|ಮೂ| ಪ್ರಸಾದ್ ತಂತ್ರಿ ಹಾಗೂ ಅಮೃತ ಮಹೋತ್ಸವಕ್ಕೆ ದೇಣಿಗೆಯಿತ್ತ ದಾನಿಗಳ ಉಪಸ್ಥಿತಿಯಲ್ಲಿ ಹಳೆವಿದ್ಯಾರ್ಥಿಗಳ ಅಮೃತ ಸಂಭ್ರಮ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಾಯಂಕಾಲ ೬.೩೦ರಿಂದ ಪ್ರಸನ್ನ ಶೆಟ್ಟಿ ಬೈಲೂರು ಇವರ ಸಂಯೋಜನೆಯಲ್ಲಿ ಹಳೆವಿದ್ಯಾರ್ಥಿಗಳಿಂದ ಕಾಮಿಡಿ ಸಂಜೆ ಮತ್ತು ಹಳೆ ವಿದ್ಯಾರ್ಥಿಗಳು ಹಾಗೂ ಹಳೆ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ ೧೦ ಗಂಟೆಗೆ ಶಾರದಾ ಆರ್ಟ್ಸ್ ತಂಡದ ಐಸಿರಿ ಕಲಾವಿದೆರ್ ಮಂಜೇಶ್ವರ ಇವರಿಂದ ಮಲ್ಲ ಸಂಗತಿಯೇ ಅತ್ತ್ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಅವರು ತಿಳಿಸಿದರು. ಅಮೃತ ಮಹೋತ್ಸವದ ನೆನಪಿಗಾಗಿ ಶಾಸಕರ ಅನುದಾನದಿಂದ ಸುಸಜ್ಜಿತವಾದ ಅಮೃತ ಮಹೋತ್ಸವ ಸೌಧ, ದಾನಿಗಳ ಮೂಲಕ ಶಾಲೆಯ ರಂಗಮಂದಿರ ಪುನರ್‌ನಿರ್ಮಾಣ, ಆಟದ ಮೈದಾನ ನವೀಕರಣ, ಶಾಲೆಗೆ ಆವರಣ ಗೋಡೆ, ಪಿಠೋಪಕರಣಗಳು, ಶಾಲಾ ಅಂಗಣಕ್ಕೆ ಇಂಟರ್‌ಲಾಕ್ ಅಳವಡಿಕೆ ಇದರೊಂದಿಗೆ ಮಕ್ಕಳಿಗೆ ಬೇಕಾಗುವ ಹಲವಾರು ಅಗತ್ಯತೆಗಳನ್ನು ಮಾಡಲಾಗಿದೆ ಎಂದರು. ಗೋಷ್ಠಿಯಲ್ಲಿ ಅಮೃತಮಹೋತ್ಸವದ ಅಧ್ಯಕ್ಷರಾದ ಮೋಹನದಾಸ್ ಹೆಗ್ಡೆ, ಪ್ರದಾನ ಕಾರ್ಯದರ್ಶಿ ಬಿ. ಹರೀಶ್ ಆಚಾರ್ಯ, ಕೋಶಾಧಿಕಾರಿ ಹಾಗೂ ಶಾಲಾ ಮುಖ್ಯ ಶಿಕ್ಷಕಿ ವಸಂತಿ ಎಚ್. ಜಿ., ಕಾರ್ಯದರ್ಶಿ ಮುಸ್ತಾಫ್, ದೈಹಿಕ ಶಿಕ್ಷಣ ಶಿಕ್ಷಕ ಉದಯ ಕುಮಾರ್, ಹಳೆವಿದ್ಯಾರ್ಥಿ ಸಂಘದ ಅದ್ಯಕ್ಷ ಆನಂದ ಪೂಜಾರಿ, ಕಾರ್ಯದರ್ಶಿ ನಿತಿನ್ ಶೆಟ್ಟಿ ಉಪಸ್ಥಿರಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.