logo
WhatsApp Image 2026-04-02 at 14.46.04.jpeg
hindalco everlast.jpeg

1-5 ನೇ ತರಗತಿ :ದಸರಾ ಬಳಿಕ ಶಾಲೆ ಶುರು.... ಶಾಲೆಗೆ ಹೊರಡಲು ರೆಡಿಯಾಗಿ ಪುಟಾಣಿಗಳೆ

ಟ್ರೆಂಡಿಂಗ್
share whatsappshare facebookshare telegram
8 Oct 2021
post image

ಉಡುಪಿ: ದಸರಾ ಬಳಿಕ 1 ರಿಂದ 5ನೇ ತರಗತಿಗಳನ್ನು ಆರಂಭಿಸೋದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಈ ಕುರಿತಂತೆ ಉಡುಪಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದುವರೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಶಾಲಾ ಹಾಜರಾತಿ ಕಡ್ಡಾಯಗೊಳಿಸಿಲ್ಲ. ಇದೀಗ ದಸರಾ ಮುಗಿದ ತಕ್ಷಣ 1 ರಿಂದ 5ನೇ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಅವರಿಗೂ ಕಡ್ಡಾಯವಿಲ್ಲ ಎಂದರು. ಶಾಲೆ ಆರಂಭಗೊಂಡರೂ ಆಫ್ ಲೈನ್, ಆನ್ ಲೈನ್ ತರಗತಿಗಳು ನಡೆಯಲಿವೆ. ಗ್ರಾಮೀಣ ಭಾಗದಲ್ಲಿ ಶೇ.90ರಷ್ಟು ಹಾಜರಾತಿ ಇದೆ. ಆನ್ ಲೈನ್ ಕ್ಲಾಸ್ ನಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ತೊಂದರೆ ಕೂಡ ಆಗಿದೆ. ಹೀಗಾಗಿ ದಸರಾ ಮುಗಿದ ತಕ್ಷಣ ಶಾಲೆಗಳು ಆರಂಭಿಸುತ್ತೇವೆ. ಬಿಸಿಯೂಟ ಕೂಡ ಪ್ರಾರಂಭಿಸೋದಾಗಿ ತಿಳಿಸಿದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.