



ಉಡುಪಿ: ಬೆಂಗಳೂರಿನಲ್ಲಿ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸುತ್ತಿದ್ದು, ಪ್ರತಿಮೆ ಆವರಣದಲ್ಲಿನ ಗೋಪುರ ನಿರ್ಮಾಣಕ್ಕೆ ನಾಡಿನಾದ್ಯಂತ ಪವಿತ್ರ ಮಣ್ಣು ಸಂಗ್ರಹ ಅಭಿಯಾನ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಉಡುಪಿ ಜಿಲ್ಲೆಗೆ ಆಗಮಿಸಿದ ನಾಡಪ್ರಭು ಕೆಂಪೇಗೌಡ ರಥಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭವ್ಯ ಸ್ವಾಗತಕೋರಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ರಥವನ್ನು ಸ್ವಾಗತಿಸಿ, ಜಿಲ್ಲೆಯ ಪವಿತ್ರ ಮಣ್ಣನ್ನು ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಕೆ. ರಘುಪತಿ ಭಟ್, ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್, ಪೋಲಿಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.