logo
WhatsApp Image 2026-04-02 at 14.46.04.jpeg
hindalco everlast.jpeg

ದಕ್ಷಿಣವಲಯ ಅಥ್ಲೆಟಿಕ್ಸ್ ನಲ್ಲಿ ನಿಟ್ಟೆ ವಿದ್ಯಾರ್ಥಿಗಳ ಶ್ರೇಷ್ಠ ಸಾಧನೆ

ಟ್ರೆಂಡಿಂಗ್
share whatsappshare facebookshare telegram
17 Oct 2023
post image

ನಿಟ್ಟೆ: ಅ. ೧೫ ರಂದ ೧೭ ರವರೆಗೆ ತೆಲಂಗಾಣದ ವರಂಗಲ್ ನಲ್ಲಿ ನಡೆದ ದಕ್ಷಿಣ ವಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ೧೮ ವರ್ಷದ ಒಳಗಿನ ವಯೋಮಿತಿಯ 3,000 ಮೀಟರ್ ಓಟದಲ್ಲಿ ಡಾ.ಎನ್.ಎಸ್.ಎ.ಎಂ.ಪಿ.ಯು ಕಾಲೇಜಿನ ದ್ವಿತೀಯ ವರ್ಷದ ಕಾಮರ್ಸ್ ವಿದ್ಯಾರ್ಥಿನಿ ನಂದಿನಿ ಜಿ ಚಿನ್ನದ ಪದಕವನ್ನು ಪಡೆದರೆ, ೨೦ ವರ್ಷದೊಳಗಿನ ವಯೋಮಿತಿಯ 800 ಮೀಟರ್ ಓಟದಲ್ಲಿ ಡಾ.ಎನ್.ಎಸ್.ಎ.ಎಂ ಪ್ರಥಮದರ್ಜೆ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಪ್ರತೀಕ್ಷಾ ಕಂಚಿನ ಪದಕ ಹಾಗೂ ೧೮ ವರ್ಷದ ಒಳಗಿನ ವಯೋಮಿತಿಯ ಜಾವೆಲಿನ್ ಥ್ರೋನಲ್ಲಿ ಡಾ.ಎನ್.ಎಸ್.ಎ.ಎಂ.ಪಿ.ಯು ಕಾಲೇಜಿನ ದ್ವಿತೀಯ ವರ್ಷದ ಕಾಮರ್ಸ್ ವಿದ್ಯಾರ್ಥಿ ಕುಲದೀಪ್ ಕುಮಾರ್ ಕಂಚಿನ ಪದಕ ತಮ್ಮದಾಗಿಸಿಕೊಂಡಿರುವರು.. ಈ ಮೂವರು ಪದಕ ವಿಜೇತರು ಈ ಸಾಧನೆಯಿಂದ ನವೆಂಬರ್ 7 ರಿಂದ 9ರವರೆಗೆ ಕೊಯಮತ್ತೂರಿನಲ್ಲಿ ನಡೆಯಲಿರುವ ಜೂನಿಯರ್ ರಾಷ್ಟ್ರೀಯ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.