logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಕೋವಿಡ್ ತಡೆಗೆ ರಾಜ್ಯ ಸರ್ಕಾರದಿಂದ ಗೈಡ್ ಲೈನ್ಸ್ ಪ್ರಕಟ..!

ಟ್ರೆಂಡಿಂಗ್
share whatsappshare facebookshare telegram
19 Dec 2023
post image

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ನ ಜೆಎನ್1 ರೂಪಾಂತರಿಯಿಂದಾಗಿ ಕೋವಿಡ್-19 ಸೋಂಕು ಹರಡುವಿಕೆ ತೀವ್ರಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಸರ್ಕಾರ ಮಂಗಳವಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ ಮಾಡಲು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.

ಕೋವಿಡ್ ಮಾರ್ಗಸೂಚಿ ಹೀಗಿವೆ: ಕೇರಳ, ತಮಿಳುನಾಡು ರಾಜ್ಯಗಳ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ

ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ( ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳುವಾಗ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಸೂಕ್ತ.

ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು, ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಭೇಟಿ ನೀಡದಿರುವುದು ಸೂಕ್ತವಾಗಿದೆ.

ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲನೆಯು ಅಗತ್ಯವಾಗಿದೆ ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರೀಕರು / ದುರ್ಬಲರನ್ನು (vulnerable) ಅವಶ್ಯವಿದ್ದಲ್ಲಿ, ಮಾತ್ರವೇ ಭೇಟಿ ಮಾಡುವುದು.

ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು, ಜನಸಂದಣಿಯ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ಅಂತರ ರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ ಧರಿಸುವುದು ಹೆಚ್ಚಿನ ಗಾಳಿ-ಬೆಳಕು ಇಲ್ಲವ ಮತ್ತು ಜನದಟ್ಟಣೆ ಇರುವ ಸ್ಥಳಗಳಿಗೆ ತೆರಳದಿರುವುದೂ ಸೇರಿದಂತೆ ಇತರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಸೂಕ್ತವಾಗಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.