



ರಾಜ್‌ಕೋಟ್: ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಶನಿವಾರ ಗೇಮಿಂಗ್ ಝೋನ್‌ನಲ್ಲಿ ಬೆಂಕಿ ಅವಘಡ ಸಂಭವಿಸಿ 27 ಮಂದಿ ಸಾವಿಗೀಡಾಗಿದ್ದಾರೆ. ಮೃತರಲ್ಲಿ 12ರ ಹರೆಯದ 12 ಮಕ್ಕಳು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಹಲವು ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ. ಗೇಮಿಂಗ್ ಝೋನ್ ನಡೆಯುತ್ತಿದ್ದ ತಾತ್ಕಾಲಿಕ ಕಟ್ಟಡ ಕುಸಿದು ಬಿದ್ದಿದೆ. ಮೃತದೇಹಗಳೆಲ್ಲ ಸುಟ್ಟುಕರಕಲಾಗಿದ್ದು, ಗುರುತು ಹಿಡಿಯುವುದು ಕಷ್ಟವಾಗಿದೆ. ವಿಧಿವಿಜ್ಞಾನ ಪರೀಕ್ಷೆ ನಡೆಸುವ ಅಗತ್ಯವಿದೆ ಎಂದು ಪೊಲೀಸರು ಹೇಳಿದ್ದಾರೆ. ನಾವು ಸಾಧ್ಯವಾದಷ್ಟು ದೇಹಗಳನ್ನು ಹಿಂಪಡೆಯಲು ಪ್ರಯತ್ನಿಸುತ್ತಿದ್ದೇವೆ. ಸದ್ಯಕ್ಕೆ ಸುಮಾರು 27 ಮೃತದೇಹಗಳು ಪತ್ತೆಯಾಗಿದ್ದು, ಹೆಚ್ಚಿನ ತನಿಖೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಕಮಿಷನರ್ ರಾಜು ಭಾರ್ಗವ ತಿಳಿಸಿದ್ದಾರೆ. ಗೇಮಿಂಗ್ ಝೋನ್ ಯುವರಾಜ್ ಸಿಂಗ್ ಸೋಲಂಕಿ ಎಂದು ಗುರುತಿಸಲ್ಪಟ್ಟ ವ್ಯಕ್ತಿಯ ಒಡೆತನದಲ್ಲಿದೆ ಎಂದು ತಿಳಿದುಬಂದಿದೆ. ಮೃತದೇಹಗಳನ್ನು ಗುರುತಿಸಿ ಸಂಬಂಧಿಕರಿಗೆ ಹಸ್ತಾಂತರಿಸುವ ಕಾರ್ಯವನ್ನು ಆದ್ಯತೆಯಲ್ಲಿ ಮಾಡಲು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ರಾಜ್ಯ ಸರಕಾರ ಮೃತರ ಕುಟುಂಬಗಳಿಗೆ ತಲಾ 4 ಲ. ರೂ. ಪರಿಹಾರ ಘೋಷಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.