



ಗುಲಾಬ್ ಚಂಡಮಾರುತ ಪರಿಣಾಮ ಮಹಾರಾಷ್ಟ್ರದ ಮರಾಠವಾಡ ಸೇರಿದಂತೆ ಹಲವೆಡೆ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈಗಾಗಲೇ13 ಮಂದಿ ಮೃತಪಟ್ಟಿದ್ದಾರೆ. ವಿದರ್ಭ, ಯಾವತ್ಮಲ್ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗಿದ್ದು, ಅಲ್ಲಿ ಸಿಲುಕಿದ್ದ 560 ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ. ಪ್ರವಾಹದಿಂದಾಗಿ ಯಾವತ್ಮಲ್ ಜಿಲ್ಲೆಯಲ್ಲಿ ರಾಜ್ಯ ಸಾರಿಗೆ ನಿಗಮದ ಬಸ್‌ವೊಂದು ಹರಿಯುತ್ತಿದ್ದ ಸೇತುವೆ ದಾಟುವಾಗ ಕೊಚ್ಚಿಹೋಗಿದೆ. ಬಸ್ ಕಂಡಕ್ಟರ್, ಚಾಲಕ ಮೃತಪಟ್ಟಿದ್ದಾರೆ. ಮಹರಾಷ್ಟ್ರದ ಲತೂರ್‌ನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಬ್ಯಾರೇಜ್‌ಗಳು, ಗ್ರಾಮಗಳು ಮತ್ತು ನದಿಯ ದಡದಲ್ಲಿ ಸಿಲುಕಿರುವ ಜನರ ರಕ್ಷಣೆಗೆ ಎನ್‌ಡಿಆರ್‌ಎಫ್ ತಂಡ, ಹೆಲಿಕಾಪ್ಟರ್ ಮತ್ತು ದೋಣಿಗಳನ್ನು ಕಳುಹಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.