logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯದಲ್ಲಿ ಒಂದು ವರ್ಷ ಗುಟ್ಕಾ ನಿಷೇದ: ಸರ್ಕಾರದ ಮಹತ್ವದ ನಿರ್ಧಾರ

ಟ್ರೆಂಡಿಂಗ್
share whatsappshare facebookshare telegram
12 Aug 2026
post image

ಬೆಂಗಳೂರು:** ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟಕ್ಕೆ ಕರ್ನಾಟಕ ಸರ್ಕಾರ ಒಂದು ವರ್ಷದ ಅವಧಿಗೆ ರಾಜ್ಯಾದ್ಯಂತ ಸಂಪೂರ್ಣ ನಿಷೇಧ ಹೇರಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ಸೆಕ್ಷನ್ 30(2)(a) ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ (ಮಾರಾಟ ನಿಷೇಧ ಮತ್ತು ನಿರ್ಬಂಧಗಳು) ನಿಯಮಾವಳಿ-2011ರ ನಿಯಮ 2.3.4ರ ಅಡಿಯಲ್ಲಿ ರಾಜ್ಯ ಆಹಾರ ಸುರಕ್ಷತಾ ಆಯುಕ್ತರು ಈ ಕುರಿತು ಅಧಿಸೂಚನೆ ಹೊರಡಿಸಿದ್ದಾರೆ. ಅಧಿಸೂಚನೆ ಹೊರಡಿಸಿದ ದಿನದಿಂದಲೇ ನಿಷೇಧ ಜಾರಿಗೆ ಬಂದಿದೆ.

ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ತಂಬಾಕು ಅಥವಾ ನಿಕೋಟಿನ್ ಅಂಶವನ್ನು ಪ್ರತ್ಯೇಕವಾಗಿ ಪ್ಯಾಕ್ ಮಾಡಿ, ಬಳಿಕ ಗ್ರಾಹಕರು ಸುಲಭವಾಗಿ ಮಿಶ್ರಣ ಮಾಡಿಕೊಂಡು ಸೇವಿಸುವಂತೆ ಮಾರಾಟ ಮಾಡುವ ಉತ್ಪನ್ನಗಳಿಗೂ ಈ ನಿಷೇಧ ಅನ್ವಯವಾಗಲಿದೆ.

ಪ್ಯಾಕೆಟ್, ಸ್ಯಾಚೆಟ್ ಅಥವಾ ಯಾವುದೇ ಹೆಸರಿನಲ್ಲಿ ತಂಬಾಕು ಮತ್ತು ನಿಕೋಟಿನ್ ಮಿಶ್ರಿತ ಗುಟ್ಕಾ ಹಾಗೂ ಪಾನ್ ಮಸಾಲಾಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟ ನಡೆಸುವುದು ನಿಷೇಧಿತವಾಗಿದ್ದು, ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.