logo
WhatsApp Image 2026-04-02 at 14.46.04.jpeg
hindalco everlast.jpeg

ಕೊರೊನಾ ಲಸಿಕೆಯಿಂದ ಕೈನೋವು: ಕೌಡೂರಿನಲ್ಲಿ ಮನನೊಂದ ಯುವಕ ನೇಣಿಗೆ ಶರಣು

ಟ್ರೆಂಡಿಂಗ್
share whatsappshare facebookshare telegram
11 Oct 2022
post image

ಕೊರೊನಾ ಲಸಿಕೆ ಪಡೆದು ಕೈನೋವುಂಟಾದ ಪರಿಣಾಮ ಕೆಲಸಕ್ಕೆ ಹೋಗದೆ ಮನನೊಂದ ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕೌಡೂರು ಗ್ರಾಮದಲ್ಲಿ ನಡೆದಿದೆ. ಕೌಡೂರು ಗ್ರಾಮದ 37ವರ್ಷದ ಪ್ರದೀಪ್ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಇವರು ಸುಮಾರು 10 ವರ್ಷಗಳಿಂದ ಮುಂಬೈ ಹಾಗೂ ಪೂನಾದಲ್ಲಿ ಕೆಲಸ ಮಾಡಿಕೊಂಡಿದ್ದರು. ಕಳೆದ ಒಂದು ವರ್ಷದಿಂದ ಊರಿಗೆ ಬಂದು ನೆಲೆಸಿದ್ದರು. ಇವರು ಕೊರೊನಾ ಲಸಿಕೆ ಪಡೆದಿದ್ದು, ಇದರಿಂದ ಕೈನೋವುಂಟಾಗಿ ಸರಿಯಾಗಿ ಕೆಲಸ ಮಾಡಲು ಆಗುತ್ತಿರಲಿಲ್ಲ. ಇದೇ ಖಿನ್ನತೆಯಲ್ಲಿ ಮನನೊಂದು ಮನೆಯ ಪಕ್ಕದಲ್ಲಿರುವ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.