



ಮುಂಬೈ: ಮುಂಬೈ ಇಂಡಿಯನ್ಸ್ ಮಹಿಳಾ ತಂಡಕ್ಕೆ ಹರ್ಮನ್‌ಪ್ರೀತ್ ಕೌರ್ ಅವರನ್ನು ನಾಯಕಿಯನ್ನಾಗಿ ನೇಮಿಸಲಾಗಿದೆ.
ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದ ಭಾರತದ ಮೊದಲ ಕ್ರಿಕೆಟರ್ ಎನಿಸಿದ್ದ ಹರ್ಮನ್ ಪ್ರೀತ್, 20ನೇ ವಯಸ್ಸಿನಲ್ಲೇ ಪದಾರ್ಪಣೆ ಮಾಡಿದ ಬಳಿಕ ಕಳೆದೊಂದು ದಶಕದಿಂದ ಎಲ್ಲ ಕ್ರಿಕೆಟ್ ಪ್ರಕಾರದಲ್ಲೂ ಭಾರತ ತಂಡಕ್ಕೆ ಆಧಾರ ಸ್ತಂಭವೆನಿಸಿದ್ದಾರೆ.
ರಾಷ್ಟ್ರೀಯ ಮಹಿಳಾ ತಂಡದ ನಾಯಕಿಯಾಗಿರುವ ಅವರು, ಅರ್ಜುನ ಪ್ರಶಸ್ತಿ ಪುರಸ್ಕೃತೆಯೂ ಆಗಿದ್ದಾರೆ. ಮಹಿಳೆಯರ ವಿಶ್ವಕಪ್ನಲ್ಲಿ ನಾಕೌಟ್ ಹಂತದ ಪಂದ್ಯದಲ್ಲಿ ಗರಿಷ್ಠ ವೈಯಕ್ತಿಕ ರನ್ (171) ಸಿಡಿಸಿದ ದಾಖಲೆ ಜತೆಗೆ ನಾಯಕಿಯಾಗಿ ಉತ್ತಮ ಗೆಲುವಿನ ದಾಖಲೆಯನ್ನೂ ಹೊಂದಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡ ಮೊದಲ ಪಂದ್ಯದಲ್ಲಿ ಮಾರ್ಚ್ 4ರಂದು ಮುಂಬೈನ ಡಿವೈ ಪಾಟೀಲ್ಕ್ರೀಡಾಂಗಣದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ಎದುರಿಸಲಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.