



ದತ್ತಪೀಠದ ವಿವಾದಕ್ಕೆ ಸಂಬಂಧಿಸಿದಂತೆ 2018 ರಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ತ್ರಿಸದಸ್ಯ ಸಮಿತಿ ನೀಡಿದ್ದ ವರದಿಯನ್ನು ರಾಜ್ಯ ಹೈಕೋರ್ಟ್ ತಿರಸ್ಕರಿಸಿದ್ದು, ಮಂಗಳವಾರ ಮಧ್ಯಾಹ್ನ ಹೈಕೋರ್ಟ್ ನ್ಯಾಯಾಧೀಶ ಪಿ.ಎಸ್.ದಿನೇಶ್‍ಕುಮಾರ್ ಅವರಿದ್ದ ಏಕಸದಸ್ಯ ಪೀಠ ಆದೇಶ ನೀಡಿ ನಾಗಮೋಹನ್ ದಾಸ್ ಸಮಿತಿ ವರದಿಯನ್ನಾಧರಿಸಿ 2018 ಮಾರ್ಚ್-19 ರಂದು ಅಂದಿನ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ಆದೇಶವನ್ನು ರದ್ದು ಪಡಿಸಿದೆ. ಈ ಮೂಲಕ ನಾಗಮೋಹನ್ ದಾಸ್ ವರದಿಯನ್ನು ತಿರಸ್ಕರಿಸಿದೆ. ಪೀಠದಲ್ಲಿ ಹಿಂದು ಅರ್ಚಕರನ್ನು ನೇಮಿಸುವುದು ಸೇರಿದಂತೆ ಇತರೆ ವಿಚಾರಗಳಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ನ್ಯಾಯಾಲಯ ತಿಳಿಸಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.