



ಬೆಂಗಳೂರು: ಉಡುಪಿಯ ಶಿರೂರು ಮಠಕ್ಕೆ ಅಪ್ರಾಪ್ತ ಬಾಲಕನನ್ನು ಪೀಠಾಧಿಪತಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ಹೈಕೋರ್ಟ್ ನಲ್ಲಿ ವಜಾಗೊಂಡಿದೆ. ಪೀಠಾಧಿಪತಿಗಳ ನೇಮಕ ವಿಚಾರದಲ್ಲಿ 800 ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಮಠದ ಸಂಪ್ರದಾಯದಲ್ಲಿ ನ್ಯಾಯಾಲಯ ಮಧ್ಯ ಪ್ರವೇಶಿಸುವುದಿಲ್ಲ ಎಂದು ಹೇಳಿದ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಅಪ್ರಾಪ್ತ ಬಾಲಕನನ್ನು ಪೀಠಾಧಿಪತಿಯನ್ನಾಗಿ ಮಾಡಲಾಗಿದೆ ಎಂದು ಪ್ರಶ್ನಿಸಿ ಲತವ್ಯ ಆಚಾರ್ಯ ಹಾಗೂ ಇತರರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ ಚಂದ್ರ ಶರ್ಮಾ ಇಂದು ಪ್ರಕಟಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.