logo
WhatsApp Image 2026-04-02 at 14.46.04.jpeg
hindalco everlast.jpeg

ಅಂಗನವಾಡಿ ಕಾರ್ಯಕರ್ತೆಯ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಕಸಿದು ಪರಾರಿ

ಟ್ರೆಂಡಿಂಗ್
share whatsappshare facebookshare telegram
8 Nov 2022
post image

ಕಾರ್ಕಳ:

ಅಂಗನವಾಡಿ ಕಾರ್ಯಕರ್ತೆಯ ಕುತ್ತಿಗೆಯಿಂದ ಚಿನ್ನ ಕಸಿದು ಪರಾರಿಯಾದ ಘಟನೆ ಕಾರ್ಕಳ ತಾಲೂಕಿನ ಇನ್ನಾದಲ್ಲಿ ಇಂದು 9.15ಕ್ಕೆ ನಡೆದಿದೆ. ಇನ್ನಾ ನಿವಾಸಿ ರೇಖಾ ಚಿನ್ನದ ಕರಿಮಣಿ ಸರ ಕಳೆದುಕೊಂಡ ಮಹಿಳೆ. ಇವರು ಕುರ್ಕಿಲಬೆಟ್ಟುವಿನ ಅಂಗನವಾಡಿಯಲ್ಲಿ ಕಾರ್ಯಕರ್ತೆಯಾಗಿ ಕೆಲಸ ಮಾಡಿಕೊಂಡಿದ್ದು, ಸ್ಕೂಟಿಯಲ್ಲಿ ಮನೆಯಿಂದ ಅಂಗನವಾಡಿಗೆ ಇನ್ನಾ ಹೊಸಕಾಡು ರಸ್ತೆಯಲ್ಲಿ ಹೋಗುತ್ತಿದ್ದ ಸಂದರ್ಭ ಕಪ್ಪು ಬಣ್ಣದ ಬೈಕ್ ನಲ್ಲಿ ಬಂದ ಕಳ್ಳರು ಚೀಟಿ ತೋರಿಸಿ ವಿಳಾಸ ಕೇಳುವ ನೆಪದಲ್ಲಿ ರೇಖಾರವರ ಬಳಿ ಬಂದು ಕುತ್ತಿಗೆಯಲ್ಲಿದ್ದ ಸುಮಾರು 32 ಗ್ರಾಮ್ ತೂಕದ ಚಿನ್ನದ ಕರಿಮಣಿ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಕಿತ್ತುಕೊಂಡು ಹೋದ ಚಿನ್ನದ ಕರಿಮಣಿ ಸರದ ಅಂದಾಜು ಮೌಲ್ಯ 1,44 ಲಕ್ಷ- ರೂ. ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.