



ದುರ್ಗ : ದುರ್ಗ ಪಂಚಾಯತ್ ಸಭಾಂಗಣದಲ್ಲಿ ನೋಂದಾಯಿತ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಉಚಿತ ಅರೋಗ್ಯ ತಪಾಸಣೆ ಶಿಬಿರವು ಎ. ೨೦ರಂದು ಜರುಗಿತು. ಕಾರ್ಮಿಕ ಇಲಾಖೆ ಉಡುಪಿ, ಆದರ್ಶ ಆಸ್ಪತ್ರೆ ಹಾಗೂ ದುರ್ಗ ಪಂಚಾಯತ್ ನ ಜಂಟಿ ಸಹಯೋಗದಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ ದುರ್ಗ ಪಂಚಾಯತ್ ವ್ಯಾಪ್ತಿಯ ಕಟ್ಟಡ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರು ಜೊತೆಗೆ ಪುರಸಭೆ ವ್ಯಾಪ್ತಿಯ ಕಟ್ಟಡ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರು ಸಾಕಷ್ಟು ಸಂಖ್ಯೆಯಲ್ಲಿ ಇದರ ಪ್ರಯೋಜನವನ್ನು ಪಡೆದುಕೊಂಡರು. ಸರಕಾರವು ನೋಂದಾಯಿತ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಹಲವಾರು ಯೋಜನೆಗಳು, ಸವಲತ್ತುಗಳನ್ನು ಹಮ್ಮಿಕೊಂಡಿದೆ. ಕಾರ್ಮಿಕರು ಜಾಗೃತರಾಗಿ ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತೀಶ್ ನಾಯಕ್ ರವರು ತಿಳಿಸಿದರು. ಪಂಚಾಯತ್ ಸದಸ್ಯರಾದ ಮಹೇಶ್ ರಾವ್, ಉಮಾವತಿ, ಕಾರ್ಯದರ್ಶಿ ಸುಬ್ಬಯ್ಯ ಹಾಗೂ ಸಿಬ್ಬಂದಿವರ್ಗ ಸಹಕರಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.