



ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ ಆನಂದ್ ವೇಣುಗೋಪಾಲ್ ಮತ್ತು ವೈದ್ಯಕೀಯ ಅಧೀಕ್ಷಕ ಡಾ ಅವಿನಾಶ್ ಶೆಟ್ಟಿ ಜಂಟಿಯಾಗಿ ಸೆ.30ರಂದು ಹೃದಯ ಆರೋಗ್ಯ ಜಾಗೃತಿ ಕಲಾ ಶಿಲ್ಪ ಅನಾವರಣಗೊಳಿಸಿದರು . ಈ ಸಂದರ್ಭದಲ್ಲಿ ಮಾತನಾಡಿದ ಡಾ ಅವಿನಾಶ ಶೆಟ್ಟಿ ಅವರು ಹೃದಯ ಆರೋಗ್ಯ ಕಾಪಾಡುವಲ್ಲಿ ಸಮತೋಲಿತ ಆಹಾರ ಮತ್ತು ನಿತ್ಯ ವ್ಯಾಯಾಮದ ಮಹತ್ವವನ್ನು ತಿಳಿಸಿದರು . ಈ ಸಂದರ್ಭದಲ್ಲಿ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ ಪದ್ಮಕುಮಾರ್ , ಹೃದ್ರೋಗ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಗಣೇಶ್ ಕಾಮತ್, ಡಾ ಗುರುಪ್ರಸಾದ್ ರೈ , ಡಾ ಕೀರ್ತಿನಾಥ ಬಲ್ಲಾಳ, , ಶ್ರೀ ಸಚಿನ್ ಕಾರಂತ್ ಮತ್ತು ಶ್ರೀ ಮೋಹನ್ ಶೆಟ್ಟಿ ಉಪಸ್ಥಿತರಿದ್ದರು . ಶ್ರೀನಾಥ್ ಮಣಿಪಾಲ ಮತ್ತು ರವಿ ಹಿರೇಬೆಟ್ಟು ಪರಿಸರ ಸ್ನೇಹಿ ವಸ್ತುಗಳಿಂದ ಶಿಲ್ಪವನ್ನು ತಯಾರಿಸಿದ್ದರು. ಶ್ರೀ ಕೃಷ್ಣಪ್ರಸಾದ್ ಕಾರ್ಯಕ್ರಮ ನಿರ್ವಯಿಸಿದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.