



ಉಡುಪಿ: ವಿಶ್ವ ಹೃದಯ ದಿನದ ಅಂಗವಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಕಲಾ ಶಿಲ್ಪ ಅನಾವರಣ ಮತ್ತು ಉಚಿತ ಹೃದಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು. ಕರಾವಳಿ ಕಾವಲು ಪಡೆಯ ಎಸ್ಪಿಯ ಅಬ್ದುಲ್ ಅಹದ್ ಹೃದಯ ಆರೋಗ್ಯ ಜಾಗೃತಿ ಶಿಲ್ಪವನ್ನು ಅನಾವರಣಗೊಳಿಸಿದರು. ಬಳಿಕ ಮಾತನಾಡಿ, ಕಾಲ ಕಾಲಕ್ಕೆ ತಕ್ಕಂತೆ ನಮ್ಮ ಹೃದಯ ತಪಾಸಣೆ ಮಾಡುವುದರ ಮೂಲಕ ನಮ್ಮ ಹೃದಯ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು. ಕೆಎಂಸಿ ಡೀನ್ ಡಾ. ಶರತ್ ಕುಮಾರ್ ರಾವ್, ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ಮುಖ್ಯ ನಿರ್ವಹಣಾಧಿಕಾರಿ ಡಾ. ಆನಂದ್ ವೇಣುಗೋಪಾಲ್, ಕರಾವಳಿ ಕಾವಲು ಪಡೆಯ ಪೊಲೀಸ್ ನಿರೀಕ್ಷಕ ಡಾ ಶಂಕರ್ ಎಸ್ ಕೆ ಉಪಸ್ಥಿತರಿದ್ದರು. ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ. ಅಶ್ವಿನಿ ಕುಮಾರ್ ಹೃದಯ ಆರೋಗ್ಯದ ಕುರಿತು ಮಾಹಿತಿ ನೀಡಿದರು. ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ ಪದ್ಮಕುಮಾರ್ ಸ್ವಾಗತಿಸಿದರು, ಹೃದಯನಾಳ ಮತ್ತು ಎದೆಗೂಡಿನ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಗಣೇಶ್ ಕಾಮತ್ ವಂದಿಸಿದರು. ಡಾ ಈಶ್ವರಿ ಆಚಾರ್ ಕಾರ್ಯಕ್ರಮ ನಿರೂಪಿಸಿದರು. ಕಲಾವಿದ ಶ್ರೀನಾಥ್ ಮಣಿಪಾಲ ಮತ್ತು ರವಿ ಹಿರೇಬೆಟ್ಟು ಪರಿಸರ ಸ್ನೇಹಿ ವಸ್ತುಗಳಿಂದ ಶಿಲ್ಪವನ್ನು ತಯಾರಿಸಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.