logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯದಲ್ಲಿ ಹೆಚ್ಚುತ್ತಿದೆ ಉಷ್ಣ ಮಾರುತ : ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ರಾಜ್ಯ
share whatsappshare facebookshare telegram
7 Mar 2023
post image

ಬೆಂಗಳೂರು : ರಾಜ್ಯದಲ್ಲಿ ಉಷ್ಣ ಮಾರುತ ಪ್ರಭಾವ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬಿಸಿಲ ಬೇಗೆಯಿಂದ ಉಂಟಾಗಬಹುದಾದ ಸನ್‌ ಸ್ಟೊ್ರೕಕ್‌, ಹೀಟ್‌ ಸ್ಟೊ್ರೕಕ್‌ನಂತಹ ಅಪಾಯಗಳಿಂದ ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.

ಈ ಬಗ್ಗೆ ಸಾರ್ವಜನಿಕರಿಗೆ ಮಾತ್ರವಲ್ಲದೆ ಬಿಬಿಎಂಪಿ ಹಾಗೂ ಜಿಲ್ಲಾಡಳಿತಗಳಿಗೂ ಪ್ರತ್ಯೇಕ ಮಾರ್ಗಸೂಚಿ ನೀಡಿದ್ದು, ಆಯಾ ಜಿಲ್ಲೆ ಹಾಗೂ ಪಾಲಿಕೆಗಳ ವ್ಯಾಪ್ತಿಗಳ ಜನರಿಗೆ ಉಷ್ಣ ಮಾರುತಗಳಿಂದ ರಕ್ಷಣೆ ಪಡೆಯಲು ಅಗತ್ಯ ವ್ಯವಸ್ಥೆ ಮಾಡುವಂತೆ ಸೂಚಿಸಿದೆ.

ನವಜಾತ ಶಿಶುಗಳು, ಪುಟ್ಟಮಕ್ಕಳು, ಗರ್ಭಿಣಿಯರು, ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು, ಅನಾರೋಗ್ಯ ಸಮಸ್ಯೆಗಳಿರುವವರು, ವಿಶೇಷವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಲಾಗಿದೆ. ಜತೆಗೆ ಕೆಲಸದ ಸ್ಥಳಗಳಲ್ಲಿ ಕಾರ್ಮಿಕರು ಹಾಗೂ ಮಾಲೀಕರಿಗೂ ಮಾರ್ಗಸೂಚಿ ನೀಡಿದ್ದು, ಬಿಸಿಲಿನಲ್ಲಿ ಕೆಲಸ ಮಾಡುವ ಕಾರ್ಮಿಕರ ಆರೋಗ್ಯ ಸಂರಕ್ಷಣೆಗಾಗಿ ಸೂಕ್ತ ಮಾರ್ಪಾಡುಗಳನ್ನು ಮಾಡಿಕೊಳ್ಳುವಂತೆ ಮಾಲೀಕರಿಗೆ ನಿರ್ದೇಶನ ನೀಡಲಾಗಿದೆ.

ಕಾರ್ಮಿಕರು ಪ್ರತಿ 20 ನಿಮಿಷಗಳಿಗೊಮ್ಮೆ ಗ್ಲಾಸು ನೀರು ಕುಡಿಯಬೇಕು. ಪ್ರತಿ 1 ಗಂಟೆಯ ಕೆಲಸಕ್ಕೆ 5 ನಿಮಿಷ ಬಿಡುವು ನೀಡಬೇಕು. ಕೆಲಸಗಾರರಿಗೆ ನೆರಳಿಗಾಗಿ ತಾತ್ಕಾಲಿಕ ಶೆಡ್‌ ವ್ಯವಸ್ಥೆ ಮಾಡಬೇಕು. ಗರ್ಭಿಣಿಯರು, ವೃದ್ಧರಿಗೆ ಕೆಲಸ ಮಾಡಲು ಆಗುತ್ತದೆಯೇ ಎಂಬುದನ್ನು ಮೊದಲೇ ಪರೀಕ್ಷಿಸಿಕೊಳ್ಳಬೇಕು ಎಂಬಿತ್ಯಾದಿ ನಿರ್ದೇಶನಗಳನ್ನು ನೀಡಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.