logo
WhatsApp Image 2026-04-02 at 14.46.04.jpeg
hindalco everlast.jpeg

ಮುಂದಿನ ಎರಡು ದಿನಗಳಲ್ಲಿ ಭಾರಿ ಮಳೆ ನಿರೀಕ್ಷೆ

ಟ್ರೆಂಡಿಂಗ್
share whatsappshare facebookshare telegram
29 May 2022
post image

ಬೆಂಗಳೂರು : ಮುಂದಿನ 24 ಗಂಟೆಗಳಲ್ಲಿಕೇರಳ, ಕರ್ನಾಟಕ, ತಮಿಳುನಾಡು ಸೇರಿದಂತೆ ಹಿಮಾಲಯ, ಬಿಹಾರ, ಮತ್ತು ಪಶ್ಚಿಮ ಬಂಗಾಳದಲ್ಲಿ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಭಾರೀ ಮಳೆಯಾಗಲಿದೆ.

ಸಾಮಾನ್ಯವಾಗಿ ಜೂನ್​ 1 ರಂದು ಮಾನ್ಸೂನ್​ ಮಾರುತಗಳು ಕೇರಳ ಪ್ರವೇಶಿಸುವುದು ವಾಡಿಕೆ. ಈ ವರ್ಷ ಮೂರು ದಿನ ಮೊದಲೇ ಮಾನ್ಸೂನ್​ ಪ್ರವೇಶವಾಗಿದೆ ಎಂದು ಐಎಂಡಿ ತಿಳಿಸಿದೆ. ಕರ್ನಾಟಕ, ಆಂದ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಮುಂದಿನ 24 ಗಂಟೆಯೊಳಗೆ ಮಳೆಯಾಗಲಿದ್ದು, ತಮಿಳುನಾಡು, ಪುದುಚೇರಿ ಮತ್ತು ಕರೈಕಲ್​ನಲ್ಲಿ ಐದು ದಿನದ ನಂತರ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.

ಸದ್ಯ ಮಾನ್ಸೂನ್​ ಮಾರುತಗಳು 40-50 ಕಿಮೀ ವೇಗದಲ್ಲಿದ್ದು, ಇದು ತನ್ನ ವೇಗವನ್ನು ಮತ್ತಷ್ಟು ಹೆಚ್ಚಿಸಿ, ಭಾರೀ ಬಿರುಗಾಳಿ ಸಹಿತ ಮಳೆಯಾಗಲಿದೆ . ಒಟ್ಟಾರೆ ಈ ಬಾರಿಯ ಮಾನ್ಸೂನ್​​ ದೇಶಾದ್ಯಂತ ಉತ್ತಮ ಮಳೆ ತರಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.