logo
WhatsApp Image 2026-04-02 at 14.46.04.jpeg
hindalco everlast.jpeg

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಟ್ರೆಂಡಿಂಗ್
share whatsappshare facebookshare telegram
5 Jul 2023
post image

ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 24 ಗಂಟೆಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆಯು ಈ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಿದೆ.

ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ 20 ಸೆಂ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಿಗೆ ಜುಲೈ 6 ಮತ್ತು 7ಕ್ಕೆ ಆರೆಂಜ್, 8 ಮತ್ತು 9ಕ್ಕೆ ಯೆಲ್ಲೊ ಅಲರ್ಟ್ ನೀಡಲಾಗಿದೆ.

ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯಲ್ಲಿ 17 ಸೆಂ.ಮೀ. ಮಳೆಯಾಗಿದೆ. ಪಣಂಬೂರು, ಮಂಗಳೂರಿನಲ್ಲಿ ತಲಾ 15, ಉತ್ತರ ಕನ್ನಡದ ಅಂಕೋಲಾದಲ್ಲಿ 12, ಶಿರಾಲಿ, ಹೊನ್ನಾವರ, ಮಂಕಿಯಲ್ಲಿ ತಲಾ 9, ಗೋಕರ್ಣ, ಬೇಲಿಕೇರಿ, ಕುಂದಾಪುರದಲ್ಲಿ ತಲಾ 8, ಗೇರಸೊಪ್ಪಾ, ಕಾರವಾರ, ಕೋಟ ಹಾಗೂ ಉಡುಪಿಯಲ್ಲಿ ತಲಾ 7 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾರಿ ಮಳೆಯಿಂದ ಮಂಗಳವಾರ ಸಂಜೆಯಿAದ ಕರಾವಳಿಯಲ್ಲಿ ಜನಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಕೆಲವೆಡೆ ವಿದ್ಯುತ್ ಕೂಡ ಕೈಕೊಟ್ಟಿದೆ. ಕಳೆದ ನಾಲ್ಕು ದಿನಗಳಿಂದ ಕರಾವಳಿಯಲ್ಲಿ ಉತ್ತಮ ಮಳೆಯಾಗುತ್ತಿತ್ತು. ಮಂಗಳವಾರ ಸಂಜೆಯಾಗುತ್ತಿದ್ದAತೆ ಮಳೆ ಬಿರುಸಾಗಿ ಬೀಳುತ್ತಿದೆ. ಇನ್ನೂ ಮೂರು ದಿನಗಳ ಕಾಲ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೇಂಜ್ ಅಲರ್ಟ್ ನೀಡಲಾಗಿದೆ.

ಉತ್ತರ ಕನ್ನಡದ ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿದೆ. ಭಟ್ಕಳದಲ್ಲಿ ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿ ಸಂಚಾರ ಅಸ್ತವ್ಯಸ್ತವಾಗಿದೆ. ಕೆಲವೆಡೆ ಮನೆಗಳ ಮೇಲೆ ಮರ ಉರುಳಿ ಹಾನಿ ಉಂಟಾಗಿದೆ. ಜಿಲ್ಲೆಯ ಕರಾವಳಿಯ ಕೆಲವೆಡೆ ಸೋಮವಾರ ರಾತ್ರಿ ಆಗಾಗ ಭಾರಿ ಮಳೆಯಾಗಿತ್ತು. ಭಟ್ಕಳದಲ್ಲಿ ಸೋಮವಾರ ರಾತ್ರಿ ಭಾರಿ ಮಳೆ ಸುರಿದರೆ, ಮಂಗಳವಾರ ಮಧ್ಯಾಹ್ನದಿಂದ ಭಾರಿ ಮಳೆ ಮುಂದುವರಿದಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.