

ಬೆಂಗಳೂರು:** ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಕರಾವಳಿ ಹಾಗೂ ಮಲೆನಾಡು ಭಾಗದ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಜಾರಿಗೊಳಿಸಲಾಗಿದೆ.
ಇದೇ ವೇಳೆ ಕೊಡಗು, ಹಾಸನ, ಧಾರವಾಡ, ಗದಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿ ಭಾಗದಲ್ಲಿ ಗಂಟೆಗೆ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.