



ನವದೆಹಲಿ: ಕರ್ನಾಟಕ ಸೇರಿದಂತೆ ಮುಂದಿನ 3 ದಿನ ದೇಶಾದ್ಯಂತ ಮಿಂಚು, ಗುಡಗುಸಹಿತ ಭಾರೀ ಮಳೆಯಾಗಲಿದ್ದು, ತೀವ್ರ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಕರ್ನಾಟಕದ ಹಲವೆಡೆ ಈಗಾಗಲೇ ಭಾರಿ ಮಳೆಯಾಗುತ್ತಿದೆ.
ಮಹಾರಾಷ್ಟ್ರ ಹಾಗೂ ಗುಜರಾತ್‌ನಲ್ಲಿ ಮಳೆ ಸಂಬಂಧಿತ ಅವಘಡಗಳಿಂದ 10 ಜನ ಮೃತಪಟ್ಟಿದ್ದಾರೆ.ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಮಾಹಿತಿ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಮುಂದಿನ ಮೂರು ದಿನ ದೇಶಾದ್ಯಂತ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.ಕಳೆದ 24 ಗಂಟೆಯಿಂದ ದೇಶದ ಬಹುತೇಕ ರಾಜ್ಯಗಳಲ್ಲಿ ಭಾರೀ ಮಳೆಯಾಗಿದೆ. ಮುಂದಿನ 3 ದಿನಗಳವರೆಗೆ ಹೀಗೆಯೇ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.