logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯದ ಕೆಲವೆಡೆ ಭಾರೀ ಮಳೆ ಸಾಧ್ಯತೆ

ಟ್ರೆಂಡಿಂಗ್
share whatsappshare facebookshare telegram
7 Apr 2023
post image

ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದ ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಉತ್ತರ ಒಳನಾಡಿನ ಗದಗ, ಕೊಪ್ಪಳ, ಹಾವೇರಿ, ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ರಾಯಚೂರು, ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾ., ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ತುಮಕೂರು, ಚಾಮರಾಜನಗರ, ಮೈಸೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆ, ದಕ್ಷಿಣ ಕನ್ನಡದ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ರಾಜ್ಯದ ಉಳಿದ ಕಡೆಗಳಲ್ಲಿ ಒಣ ಹವೆ ಮುಂದುವರಿಯಲಿವೆ. ಮುಂದಿನ 24 ಗಂಟೆಗಳಲ್ಲಿ ಬೀದರ್‌, ಯಾದಗಿರಿ, ಕಲಬುರಗಿ, ವಿಜಯಪುರದಲ್ಲಿ ಆಲಿಕಲ್ಲು ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದೆ. ತಾಸಿಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಗಳಿವೆ. ಕರಾವಳಿಯ ದಕ್ಷಿಣಕನ್ನಡ ಜಿಲ್ಲೆ ಹಾಗೂ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು, ಮಿಂಚಿನ ಮುನ್ನೆಚ್ಚರಿಕೆ ನೀಡಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.