logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ

ಟ್ರೆಂಡಿಂಗ್
share whatsappshare facebookshare telegram
23 Jul 2023
post image

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ರಾಜ್ಯದ ಕರಾವಳಿ, ಒಳನಾಡಿನಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಒಳನಾಡಿನ ಹಲವೆಡೆ ಕಳೆದ ಮೂರ್ನಾಲ್ಕು ದಿನಗಳಿಂದ ವರುಣ ಅಬ್ಬರಿಸುತ್ತಿದ್ದು, ಮುಂದಿನ ಮೂರ್ನಾಲ್ಕು ದಿನವೂ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ.

ಕರಾವಳಿಗೆ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಿದ್ದು, 3,4 ಮತ್ತು 5ನೇ ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಿದ್ದು, ನಾಳೆ ಆರೆಂಜ್ ಅಲರ್ಟ್ ಅನ್ನು ಘೋಷಿಸಲಾಗಿದೆ. ಉತ್ತರ ಒಳನಾಡಿಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಗುಡುಗು, ಮಿಂಚು ಸಹಿತ ಗಾಳಿ ಮಳೆಯಾಗುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವೊಮ್ಮೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.